fbpx
ಸಮಾಚಾರ

“ಯಡಿಯೂರಪ್ಪನವರೇ ತಂತಿ ಮೇಲೆ ನಡೆಯಲು ಹೋದ್ರೆ, ಬಿದ್ದು ಹೋಗ್ತೀರಿ” ಸಿದ್ದರಾಮಯ್ಯ ಲೇವಡಿ

“ಸಿಎಂ ಯಡಿಯೂರಪ್ಪನವರೇ ಸುಮ್ಮನೆ ಏಕೆ ತಂತಿಯ ಮೇಲೆ ನಡೆಯುತ್ತಿದ್ದೀರಿ? ತಂತಿಯ ಮೇಲೆ ನಡೆದರೆ ಬಿದ್ದು ಹೋಗ್ತೀರ. ಹೀಗೆ ಅಧಿಕಾರ ಚಲಾಯಿಸಲು ಸುಮ್ಮನೆ ರಾಜೀನಾಮೆ ಕೊಟ್ಟು ನಡೆಯಿರಿ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ವೀಕ್ ಚೀಫ್‍ಮಿನಿಸ್ಟರ್, ಯಡಿಯೂರಪ್ಪ ಅವರಿಗೆ ಪಕ್ಷದವರೇ ತುಂಬಾ ತೊಂದರೆ ಕೊಡುತ್ತಿದ್ದಾರೆ. ಅವರು ರೆಕ್ಕೆ ಪುಕ್ಕಗಳು ಕಟ್ ಮಾಡಿದ್ದಾರೆ. ಅಮಿತ್ ಶಾ, ಮೋದಿ ಬಳಿ ಯಡಿಯೂರಪ್ಪಗೆ ಮಾತನಾಡುವ ಶಕ್ತಿಯಿಲ್ಲ. ನೆರೆ ಪ್ರವಾಹ ಪರಿಹಾರ ಕೇಂದ್ರದಲ್ಲಿ ಕೇಳಲು ಧೈರ್ಯವಿಲ್ಲ. ಬಿಜೆಪಿಗೆ 103 ಸೀಟ್‍ಗಳು ಇವೆ. ಹೀಗಾಗಿ ಬಿಜೆಪಿ ಸರ್ಕಾರ ಪತನವಾಗುತ್ತೆ. ನಮ್ಮ ಶಾಸಕರಿಗೆ ಆಸೆ ತೋರಿಸಿ ಅಧಿಕಾರಕ್ಕೆ ಬಂದಿದ್ದಾರೆ.

ಬಿಜೆಪಿ ಅಲ್ಪಮತದ ಸರಕಾರವಾಗಿದ್ದು, ಅನೈತಿಕವಾಗಿ ರಚನೆಗೊಂಡಿದೆ. ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ದಾಖಲಿಸಲಿದ್ದು, ಬಿಜೆಪಿ ಸರಕಾರ ಪತನವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯಡಿಯೂರಪ್ಪ ಹೇಳಿದ್ದೇನು?
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ವೀಕ್ ಚೀಫ್‍ಮಿನಿಸ್ಟರ್, ಯಡಿಯೂರಪ್ಪ ಅವರಿಗೆ ಪಕ್ಷದವರೇ ತುಂಬಾ ತೊಂದರೆ ಕೊಡುತ್ತಿದ್ದಾರೆ. ಅವರು ರೆಕ್ಕೆ ಪುಕ್ಕಗಳು ಕಟ್ ಮಾಡಿದ್ದಾರೆ. ಅಮಿತ್ ಶಾ, ಮೋದಿ ಬಳಿ ಯಡಿಯೂರಪ್ಪಗೆ ಮಾತನಾಡುವ ಶಕ್ತಿಯಿಲ್ಲ. ನೆರೆ ಪ್ರವಾಹ ಪರಿಹಾರ ಕೇಂದ್ರದಲ್ಲಿ ಕೇಳಲು ಧೈರ್ಯವಿಲ್ಲ. ಬಿಜೆಪಿಗೆ 103 ಸೀಟ್‍ಗಳು ಇವೆ. ಹೀಗಾಗಿ ಬಿಜೆಪಿ ಸರ್ಕಾರ ಪತನವಾಗುತ್ತೆ. ನಮ್ಮ ಶಾಸಕರಿಗೆ ಆಸೆ ತೋರಿಸಿ ಅಧಿಕಾರಕ್ಕೆ ಬಂದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top