fbpx
ಸಮಾಚಾರ

ಇಂದು ಅಥವಾ ನಾಳೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಕರ್ನಾಟಕದಲ್ಲಿ ಮಹಾ ಪ್ರವಾಹ ಬಂದು ಬರೋಬ್ಬರಿ 2 ತಿಂಗಳೇ ಕಳೆದಿದೆ. ಹೀಗಿದ್ದರೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಯಾಪೈಸೆ ಪರಿಹಾರ ಸಿಕ್ಕಿಲ್ಲ. ಅಸದ್ಯ ಕೇಂದ್ರದ ಈ ನಿರ್ಲಕ್ಷ್ಯದಿಂದ ಬೇಸತ್ತ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ನೆರೆ ಪರಿಹಾರದ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ ಹೇಳಿಕೊಂಡಿದ್ದಾರೆ.

ಕೇಂದ್ರದಿಂದ ನೆರೆ ಪರಿಹಾರ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ಇಂದು ಅಥವಾ ನಾಳೆ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆ ಆಗಲಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಈಗ ಬಂದು ಚರ್ಚಿಸಿ ಹೋಗಿದ್ದಾರೆ. ನಮ್ಮ ರಾಜ್ಯ ಸೇರಿದಂತೆ ನಾಲ್ಕೈದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಒಟ್ಟಿಗೆ ಪರಿಹಾರ ಘೋಷಣೆ ಮಾಡಲಿದೆ ಎಂದು ಹೇಳಿದರು.

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಪರಿಹಾರ ಹಣ ಬಿಡುಗಡೆ ಮಾಡಿದ ಕೂಡಲೇ ಕೆಲಸ ಶುರು ಮಾಡುತ್ತೇವೆ. ಒಂದೇ ಹಂತದಲ್ಲಿ ರಾಜ್ಯದ ನಾಲ್ಕೈದು ಜಿಲ್ಲೆಗಳಿಗೆ ಕೇಂದ್ರ ಪರಿಹಾರ ನೀಡಲಿದೆ. ಹಾಗಾಗಿ ನೆರೆ ಸಂತ್ರಸ್ತರು ಆಂತಕಕ್ಕೀಡಾಗುವ ಅವಶ್ಯಕತೆ ಇಲ್ಲ ಎಂದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top