fbpx
ಸಮಾಚಾರ

‘ಬಿಹಾರಕ್ಕೆ ಮಿಡಿದ ಮೋದಿ 52 ಇಂಚಿನ ಎದೆ, ಕರ್ನಾಟಕ ನೆರೆ ವಿಚಾರದಲ್ಲಿ ಕಲ್ಲುಬಂಡೆ ಆಗಿದ್ದೇಕೆ?’ ಸಿದ್ದು ಪ್ರಶ್ನೆ

ಬಿಹಾರದ ಭೀಕರ ಮಳೆ ಹಾಗೂ ಪ್ರವಾಹಕ್ಕೆ ಜನರು ತತ್ತರಿಸಿದ್ದು ಸಂತ್ರಸ್ತರ ನೆರವಿಗೆ ಕೇಂದ್ರ ಸರಕಾರ ಸಿದ್ದ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಬಿಹಾರದ ಪ್ರವಾಹಕ್ಕೆ ತಕ್ಷಣ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಪ್ರವಾಹಕ್ಕೆ ಯಾಕೆ ಸ್ಪಂದಿಸುತ್ತಿಲ್ಲ ಎಂದು ಕನ್ನಡಿಗರು ಪ್ರಶ್ನಿಸುತ್ತಿದ್ದು ಟ್ವಿಟರ್ ನಲ್ಲಿ ನೇರವಾಗಿ ಮೋದಿ ವಿರುದ್ಧ ಆಕ್ರೋಶಗೊಂಡಿದ್ದಾರೆ.

 

 

ಸದ್ಯ ಕೇಂದ್ರದ ಈ ನಡೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಮಂದಿ ಖಂಡಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಿಹಾರ ಪ್ರವಾಹದ ಬಗ್ಗೆ ಮಿಡಿದ ಮೋದಿ ಅವರ 52 ಇಂಚಿನ ಎದೆ, ಕರ್ನಾಟಕದ ನೆರೆ ಸಂತ್ರಸ್ತರ ಬಗ್ಗೆ ಕಲ್ಲುಬಂಡೆ ಆಗಿದ್ದು ಯಾಕೆ? ಇದು 25 ಸಂಸದರನ್ನು ಆಯ್ಕೆ ಮಾಡಿ ಕಳಿಸಿದ ಕರ್ನಾಟಕದ ಬಗ್ಗೆ ತಾತ್ಸಾರವೇ? ಇಲ್ಲ ಯಡಿಯೂರಪ್ಪ ಅವರ ಬಗ್ಗೆ ದ್ವೇಷವೇ?#NamoMissing’ ಎಂದು ಪ್ರಶ್ನಿಸಿದ್ದಾರೆ.

ಬಿಹಾರ ಪ್ರವಾಹದ ಬಗ್ಗೆ ಮೋದಿಯ ಟ್ವೀಟ್ ಏನು?
ಪ್ರವಾಹಕ್ಕೀಡಾಗಿರುವ ಬಿಹಾರಕ್ಕೆ ನೆರವು ನೀಡುವುದಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ. ‘ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಳಿ ರಾಜ್ಯದಲ್ಲುಂಟಾಗಿರುವ ಪ್ರವಾಹದ ಕುರಿತು ಮಾಹಿತಿ ಪಡೆದುಕೊಂಡೆ. ಏಜೆನ್ಸಿಗಳು ಪ್ರವಾಹ ಸಂಸತ್ರಸ್ತರ ರಕ್ಷಣೆಗಾಗಿ ಸ್ಥಳೀಯ ಆಡಳಿತ ಮಂಡಳಿಯೊಂದಿಗೆ ಕೈಜೋಡಿಸಿವೆ. ಕೇಂದ್ರ ಸರ್ಕಾರ ಕೂಡಾ ರಾಜ್ಯಕ್ಕೆ ಎಲ್ಲಾ ರೀತಿಯ ಸಹಾಯ ಮಾಡಲಿದೆ’ ಎಂದು ಟ್ವೀಟ್ ಮಾಡಿದ್ದರು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top