fbpx
ಸಮಾಚಾರ

“ಕೇಂದ್ರದ ನಾಯಕರು ಯಡಿಯೂರಪ್ಪ ಅವ್ರನ್ನ ಟಾರ್ಗೆಟ್ ಮಾಡುತ್ತಿದ್ದಾರೆ” ಯತ್ನಾಳ್ ಆರೋಪ.

ಕರ್ನಾಟಕದಲ್ಲಿ ಮಹಾ ಪ್ರವಾಹ ಬಂದು ಬರೋಬ್ಬರಿ 2 ತಿಂಗಳೇ ಕಳೆದಿದೆ. ಹೀಗಿದ್ದರೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಯಾಪೈಸೆ ಪರಿಹಾರ ಸಿಕ್ಕಿಲ್ಲ. ಸದ್ಯ ಕೇಂದ್ರದ ಈ ನಿರ್ಲಕ್ಷ್ಯದಿಂದ ಬೇಸತ್ತ ಕನ್ನಡಿಗರು ಕೇಂದ್ರ ಸರ್ಕಾದರ ವಿರುದ್ಧ ಆಕ್ರೋಶಗೊಂಡಿದ್ದಾರೆ. ಇದೀಗ ಕೇಂದ್ರ ನಾಯಕರ ವಿರುದ್ಧ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನ ಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂತೆಂತಹವರನ್ನೋ ಜನರು ಮನೆಗೆ ಕಳುಹಿಸಿದ್ದಾರೆ.ಇವರೆಲ್ಲಾ ಯಾವ ಲೆಕ್ಕ,ಇವರನ್ನು ಕೆಳಗಿಳಿಸುವುದು ನಾವಲ್ಲ ರಾಜ್ಯದ ಜನರೇ ಇಳಿಸುತ್ತಾರೆ ಎಂದು ಹೇಳುವ ಮೂಲಕ ಕೇಂದ್ರದ ಧೋರಣೆಯನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದಾರೆ.

“ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಕೇಂದ್ರ ನಾಯಕರು ಟಾರ್ಗೆಟ್ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಅವರನ್ನು ಟಾರ್ಗೆಟ್ ಮಾಡುವ ಉದ್ದೇಶದಿಂದಲೇ ರಾಜ್ಯಕ್ಕೆ ಸರಿಯಾಗಿ ಅನುದಾನ ನೀಡುತ್ತಿಲ್ಲ. ರಾಜ್ಯದಲ್ಲಿ ಈಗ ಚುನಾವಣೆ ಇಲ್ಲ ಹಾಗಾಗಿಯೇ ನಮಗೆ ಪರಿಹಾರ ನೀಡುತ್ತಿಲ್ಲ ಅಂತ ಅನಿಸುತ್ತಿದೆ.” ಎಂದು ಕಿಡಿಕಾರಿದರು

ಹಳ್ಳಿ ಹಳ್ಳಿಗಳಲ್ಲಿ ಸಂಚರಿಸಿ ಪಕ್ಷ ಸಂಘಟನೆ ಮಾಡಿದ್ದು ನಾವು. ಜನರಿಗೆ ನಾವು ಉತ್ತರ ನೀಡಬೇಕು. ಇಡೀ ಉತ್ತರ ಕರ್ನಾಟಕದ ಜನ ಪರದಾಡುತ್ತಿದ್ದಾರೆ. ಬಿಹಾರದ ನೆರೆ ಸಂತ್ರಸ್ತರ ಬಗ್ಗೆ ಟ್ವೀಟ್ ಮಾಡ್ತಾರೆ ಅಂದ್ರೆ ನಮ್ಮ ಜನ ಏನು ಮಾಡಿದ್ದಾರೆ? ಜನರಿಗೆ ನಾವೇನು ಉತ್ತರ ಕೊಡಬೇಕು? ಸಾಮಾಜಿಕ ಜಾಲತಾಣಗಳಲ್ಲಿ ಜನ ನಮ್ಮ ವಿರುದ್ಧ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಯತ್ನಾಳ ತೀವ್ರವಾಗಿ ಕಿಡಿಕಾರಿದ್ದಾರೆ.

ರಾಜ್ಯದ ಜನ 25 ಸಂಸದರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಇಡೀ ದಕ್ಷಿಣ ಭಾರತದಲ್ಲಿ ಬಿಜೆಪಿ ಸಂಸದರು ಇಷ್ಟು ಸಂಖ್ಯೆಯಲ್ಲಿ ಬೇರೆ ಯಾವ ರಾಜ್ಯದಲ್ಲಿದ್ದಾರೆ? ಹೀಗೆಯೇ ಮುಂದುವರಿದರೆ ಜನ ತಕ್ಕ ಪಾಠ ಕಲಿಸಲಿದ್ದಾರೆ. ” ಎಂದರು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top