fbpx
ಸಮಾಚಾರ

“ರಾಜ್ಯದಲ್ಲಿ ಪ್ರವಾಹ ಬಂದಾಗ ಪ್ರಧಾನಿ ಬೇರೆ ಕೆಲಸದಲ್ಲಿ ಬ್ಯುಸಿ ಇದ್ದರು ಹಾಗಾಗಿ ಟ್ವೀಟ್ ಮಾಡಿರಲಿಲ್ಲ” ಸುರೇಶ್ ಅಂಗಡಿ

ಬಿಹಾರದ ಭೀಕರ ಮಳೆ ಹಾಗೂ ಪ್ರವಾಹಕ್ಕೆ ಜನರು ತತ್ತರಿಸಿದ್ದು ಸಂತ್ರಸ್ತರ ನೆರವಿಗೆ ಕೇಂದ್ರ ಸರಕಾರ ಸಿದ್ದ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಬಿಹಾರದ ಪ್ರವಾಹಕ್ಕೆ ತಕ್ಷಣ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಪ್ರವಾಹಕ್ಕೆ ಯಾಕೆ ಸ್ಪಂದಿಸುತ್ತಿಲ್ಲ ಎಂದು ಕನ್ನಡಿಗರು ಪ್ರಶ್ನಿಸುತ್ತಿದ್ದು ಟ್ವಿಟರ್ ನಲ್ಲಿ ನೇರವಾಗಿ ಮೋದಿ ವಿರುದ್ಧ ಆಕ್ರೋಶಗೊಂಡಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಬ್ಯುಸಿ ಆಗಿದ್ದರು. ಹಾಗಾಗಿ ಪ್ರವಾಹ ಕುರಿತು ಮೋದಿ ಅವರಿಗೆ ಟ್ವೀಟ್‌ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳುವ ಮೂಲಕ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ವಿವಾದ ಸೃಷ್ಟಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಪ್ರವಾಹ ಸಂತ್ರಸ್ತರಿಗೆ 10 ಸಾವಿರ ರೂಪಾಯಿ ನೀಡಲಾಗಿದೆ. ಸಂತ್ರಸ್ತರಿಗೆ ಪರಿಹಾರ ನೀಡಲಾಗಿದ್ದು ಎಲ್ಲಿಯೂ ಸಮಸ್ಯೆ ಇಲ್ಲ. ದುರ್ದೈವ ಮಾಧ್ಯಮದಲ್ಲಿ ಕೇಂದ್ರದಿಂದ ಹಣ ಬಂದಿಲ್ಲ ಎಂದು ಬಿಂಬಿಸಲಾಗಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ಹಾಗೂ ಪುನರ್ವಸತಿ ಕಾರ್ಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಿ ಕೆಲಸ ಮಾಡುತ್ತಿವೆ. ಹಣಕಾಸಿನ ತೊಂದರೆ ಇಲ್ಲ ” ಎಂದು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top