fbpx
ಸಮಾಚಾರ

“ಕೇಂದ್ರ ಸರ್ಕಾರ ಪರಿಹಾರ ಕೊಡುವುದಿಲ್ಲ” ನೆರೆ ಪರಿಹಾರದ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರತಾಪ್ ಸಿಂಹ ದರ್ಪ‌

ಕರ್ನಾಟಕದಲ್ಲಿ ಮಹಾ ಪ್ರವಾಹ ಬಂದು ಬರೋಬ್ಬರಿ 2 ತಿಂಗಳೇ ಕಳೆದಿದೆ. ಹೀಗಿದ್ದರೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಯಾಪೈಸೆ ಪರಿಹಾರ ಸಿಕ್ಕಿಲ್ಲ. ಸದ್ಯ ಕೇಂದ್ರದ ಈ ನಿರ್ಲಕ್ಷ್ಯದಿಂದ ಬೇಸತ್ತ ಕನ್ನಡಿಗರು ಕೇಂದ್ರ ಸರ್ಕಾದರ ವಿರುದ್ಧ ಆಕ್ರೋಶಗೊಂಡಿದ್ದಾರೆ. ಆದರೆ ಪರಿಹಾರ ಕೇಳಿದವರ ಮೇಲೆ ಜನರೇ ಆಯ್ಕೆ ಮಾಡಿರುವ ಸಂಸದರು ದರ್ಪ ತೋರುತ್ತಿದ್ದಾರೆ. ಹೌದು, ಪರಿಹಾರ ವಿಚಾರವಾಗಿ ಪ್ರಶ್ನೆ ಮಾಡಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಅವರು ಮಾಧ್ಯಮದವರ ಮೇಲೆಯೇ ವ್ಯಾಘ್ರಗೊಂಡಿದ್ದಾರೆ/

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವಿಷಯವನ್ನು ಸ್ಪಷ್ಟವಾಗಿ ಹೇಳಲು ಇಷ್ಟಪಡುತ್ತೇನೆ. ಕೇಂದ್ರ ಸರ್ಕಾರ ಪರಿಹಾರ ಕೊಡುವುದಿಲ್ಲ. ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ರೈತರಿಗೆ ಕೃಷಿ ಚಟುವಟಿಕೆ ತೊಂದರೆಯಾದರೆ ಮೊದಲಿನಿಂದ ಶುರು ಮಾಡುವುದಕ್ಕೆ ಕೊಡುವ ಸಹಾಯಧನವೇ ಹೊರತು ಪರಿಹಾರ ಅಲ್ಲ. ದೇಶಾದ್ಯಂತ ನೆರೆ ಬಂದಾಗ ಯಾವ ಸರ್ಕಾರ ಕೂಡ ಪರಿಹಾರ ಕೊಡುವುದಿಲ್ಲ. ಅವರು ಕೊಡುವುದು ಸಹಾಯಧನ. ” ಎಂದು ಬೇಜವಾಬ್ದಾರಿಯಾಗಿ ಹೇಳಿದ್ದಾರೆ.

ನೆರೆ ಪರಿಹಾರ ಬಾರದನ್ನು ಪ್ರಶ್ನಿಸಿದ ನಾಯಕರ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ ಸಂಸದ ಪ್ರತಾಪ್ ಸಿಂಹ, ಮೊದಲು ಸಂಸದರ ಬಗ್ಗೆ ಮಾತನಾಡುತ್ತಿದ್ದರು. ಈಗ ಮೋದಿ ವಿರುದ್ಧ ಮಾತನಾಡುತ್ತಿದ್ದಾರೆ. ಮೋದಿಯವರಿಗೆ ಪ್ರವಾಹದ ಸಂಗತಿ‌ ಮನವರಿಕೆ ಆಗಿದ್ದಕ್ಕೆ ಅಮಿತ್ ಶಾ ರನ್ನು ವೀಕ್ಷಣೆಗೆ ಕಳುಹಿಸಿದರು. ಇದು ಟೀಕಿಸುವವರ ಕಣ್ಣಿಗೆ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಅಷ್ಟೇ ಅಲ್ಲ ವಿರೋಧ ಪಕ್ಷಗಳನ್ನು ಟೀಕಿಸುವ ಭರದಲ್ಲಿ ಇಂದು ಮೈಸೂರಿನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಸಂಸದ ಪ್ರತಾಪ ಸಿಂಹ, “ಮೋದಿ ದೇವರಿದ್ದಂತೆ, ಅವರನ್ನು ಬೈದರೆ ದೇವರನ್ನೇ ಬೈದಂತೆ. ಅವರು ಆಕಾಶದ ಎತ್ತರದಲ್ಲಿದ್ದಾರೆ ಅವರನ್ನು ಉಗಿದರೆ ಅದು ನಿಮ್ಮ ಮೇಲೆಯೇ ಬೀಳುತ್ತದೆ” ಎಂಬ ಹೇಳಿಕೆ ನೀಡಿದ್ದಾರೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top