fbpx
ಸಮಾಚಾರ

“ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಹರಡಿಸಿ ಪ್ರಚೋದಿಸುವ ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ” ಡಿವಿ ಸದಾನಂದ ಗೌಡ ತಿರುಗೇಟು!

ಕರ್ನಾಟಕದಲ್ಲಿ ಮಹಾ ಪ್ರವಾಹ ಬಂದು ಬರೋಬ್ಬರಿ 2 ತಿಂಗಳೇ ಕಳೆದಿದೆ. ಹೀಗಿದ್ದರೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಯಾಪೈಸೆ ಪರಿಹಾರ ಸಿಕ್ಕಿಲ್ಲ. ಸದ್ಯ ಕೇಂದ್ರದ ಈ ನಿರ್ಲಕ್ಷ್ಯದಿಂದ ಬೇಸತ್ತ ಕನ್ನಡಿಗರು ಕೇಂದ್ರ ಸರ್ಕಾದರ ವಿರುದ್ಧ ಆಕ್ರೋಶಗೊಂಡಿದ್ದಾರೆ. ಆದರೆ ಪರಿಹಾರ ಕೇಳಿದವರ ಮೇಲೆ ಜನರೇ ಆಯ್ಕೆ ಮಾಡಿರುವ ಸಂಸದರು ದರ್ಪ ತೋರುತ್ತಿದ್ದಾರೆ. ಈಗ ಸದಾನಂದ ಗೌಡ ಅವರು ನೆರೆ ಪರಿಹಾರ ವಿಚಾರದಲ್ಲಿ ಪ್ರಶ್ನಿಸಿದ ಸೂಲಿಬೆಲೆ ವಿರುದ್ಧ ಹರಿಹಾಯ್ದಿದ್ದಾರೆ.

ಟೀಮ್ ಮೋದಿ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಟ್ವಿಟ್ಟರ್​ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಚಕ್ರವರ್ತಿ ಸೂಲಿಬೆಲೆಯವರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರು ಗರಂ ಆಗಿದ್ದು, ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಹಾರಿಕೆ ಸುದ್ದಿ ಹಬ್ಬಿಸುವವರು ದೇಶದ್ರೋಹಿಗಳು ಎಂದು ಡಿ.ವಿ ಸದಾನಂದ ಗೌಡ ಸೂಲಿಬೆಲೆ ವಿರುದ್ಧ ಕಿಡಿಕಾರಿದ್ದಾರೆ.

ಯಾರೋ ಕುಳಿತುಕೊಂಡು ಟ್ವೀಟ್ ಮಾಡುತ್ತಾರೆ. ಮಂತ್ರಿಗಿರಿ ಭಿಕ್ಷೆ ಅಂತ ನಮಗೆ ಹೇಳುವವರು, ಚಪ್ಪಾಳೆ ಗಿಟ್ಟಿಸಿಕೊಂಡು ದೇಶ ಕಟ್ಟುವವರು ಎಂದು ಹೇಳಿಕೊಳ್ಳುವವರು. ಈ ರೀತಿಯ ಮಾತುಗಳು ಸರಿಯಲ್ಲ. ಹಾರಿಕೆ ಸುದ್ದಿ ಹರಡುವವರು ದೇಶ ದ್ರೋಹಿಗಳು ಎಂದು ಗಾಂಧೀಜಿ ಹೇಳಿದ್ದಾರೆ. ಇವರೆಲ್ಲಾ ಅದೇ ಬ್ರಾಂಡ್‍ಗೆ ಸೇರುತ್ತಾರೆ. ಭಾಷಣಗಳಿಂದ, ಟ್ವೀಟ್‍ನಿಂದ ಜನರನ್ನು ಪ್ರಚೋದನೆ ಮಾಡುವುದಲ್ಲ. ಇಂತಹ ಮಾತುಗಳು ಹಾಗೂ ಜನರ ಬಗ್ಗೆ ಬಹಳ ನೋವಿದೆ ಎಂದು ಸದಾನಂದ ಗೌಡ ಅವರು ಹೇಳಿದ್ದಾರೆ.

ಬಿಹಾರದ ಪ್ರವಾಹಕ್ಕೆ ಸಹೃದಯದಿಂದ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು ಅದನ್ನೇ ದೊಡ್ಡ ಇಶ್ಯೂ ಮಾಡುವ ಪ್ರಯತ್ನವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಆರೋಪಿಸಿದ ಸಚಿವ ಸದಾನಂದ ಗೌಡ , ಭಾರೀ ಸಾಮಾಜಿಕ ಬದಲಾವಣೆ ಮಾಡುತ್ತೇವೆ ಎಂದು ಹೇಳಿಕೊಳ್ಳುವವರು ಈ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top