fbpx
ಸಮಾಚಾರ

ಸದಾನಂದ ಗೌಡ-ಸೂಲಿಬೆಲೆ ಟ್ವಿಟರ್ ಸಮರ ‘ಬ್ಲಾಕ್‌’ನಲ್ಲಿ ಅಂತ್ಯ!

ಪ್ರವಾಹ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಮತ್ತು ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ನಡುವೆ ನಡೆಯುತ್ತಿದ್ದ ಟ್ಟಿಟ್ಟರ್‌ ಸಮರ, ಹೇಳಿಕೆಗಳ ಮೇಲಾಟ ‘ಬ್ಲಾಕ್‌’ನಲ್ಲಿ ಅಂತ್ಯಕೊಂಡಿದೆ. ಅರ್ಥಾತ್‌ ಡಿ.ವಿ.ಸದಾನಂದಗೌಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಅವರನ್ನು ಬ್ಲಾಕ್ ಮಾಡಿದ್ದಾರೆ.

 

 

ಕೇಂದ್ರ ಸಚಿವರು ಬ್ಲಾಕ್ ಮಾಡಿರುವುದನ್ನು ಸ್ಕ್ರೀನ್ ಶಾರ್ಟ್ ತೆಗೆದು ಟ್ವೀಟ್ ಮಾಡಿರುವ ಚಕ್ರವರ್ತಿ ಸೂಲಿಬೆಲೆ ಅವರು, ನಿಮಗೆ ಧನ್ಯವಾದ (ಥ್ಯಾಂಕ್ ಯೂ) ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಟ್ವಿಟ್ಟಿಗರು ತಮ್ಮದೆ ರೀತಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ನಗರದಲ್ಲಿ ಮಾತನಾಡಿದ್ದ ಸದಾನಂದ ಗೌಡ “ಯಾರೋ ಕುಳಿತುಕೊಂಡು ಟ್ವೀಟ್ ಮಾಡುತ್ತಾರೆ. ಮಂತ್ರಿಗಿರಿ ಭಿಕ್ಷೆ ಅಂತ ನಮಗೆ ಹೇಳುವವರು, ಚಪ್ಪಾಳೆ ಗಿಟ್ಟಿಸಿಕೊಂಡು ದೇಶ ಕಟ್ಟುವವರು ಎಂದು ಹೇಳಿಕೊಳ್ಳುವವರು. ಈ ರೀತಿಯ ಮಾತುಗಳು ಸರಿಯಲ್ಲ. ಹಾರಿಕೆ ಸುದ್ದಿ ಹರಡುವವರು ದೇಶ ದ್ರೋಹಿಗಳು ಎಂದು ಗಾಂಧೀಜಿ ಹೇಳಿದ್ದಾರೆ. ಇವರೆಲ್ಲಾ ಅದೇ ಬ್ರಾಂಡ್‍ಗೆ ಸೇರುತ್ತಾರೆ. ಭಾಷಣಗಳಿಂದ, ಟ್ವೀಟ್‍ನಿಂದ ಜನರನ್ನು ಪ್ರಚೋದನೆ ಮಾಡುವುದಲ್ಲ. ಇಂತಹ ಮಾತುಗಳು ಹಾಗೂ ಜನರ ಬಗ್ಗೆ ಬಹಳ ನೋವಿದೆ ಎಂದು ಸದಾನಂದ ಗೌಡ ಅವರು ಹೇಳಿದ್ದರು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top