fbpx
ಸಮಾಚಾರ

ಸರ್ಕಾರದಿಂದ ನೆರೆ ಪರಿಹಾರ ಸಿಗದಿದ್ದಕ್ಕೆ ರೈತ ಆತ್ಮಹತ್ಯೆ

ಕರ್ನಾಟಕದಲ್ಲಿ ಮಹಾ ಪ್ರವಾಹ ಬಂದು ಬರೋಬ್ಬರಿ 2 ತಿಂಗಳೇ ಕಳೆದಿದೆ. ಹೀಗಿದ್ದರೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಯಾಪೈಸೆ ಪರಿಹಾರ ಸಿಕ್ಕಿಲ್ಲ. ಸದ್ಯ ಕೇಂದ್ರದ ಈ ನಿರ್ಲಕ್ಷ್ಯದಿಂದ ಬೇಸತ್ತ ಕನ್ನಡಿಗರು ಕೇಂದ್ರ ಸರ್ಕಾದರ ವಿರುದ್ಧ ಆಕ್ರೋಶಗೊಂಡಿದ್ದಾರೆ. ಆದರೆ ಇದೀಗ ಪ್ರವಾಹದಿಂದ ಆಸ್ತಿ-ಪಾಸ್ತಿ ಕಳೆದುಕೊಂಡ ಹಿನ್ನೆಲೆ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಕಳಸ ಸಮೀಪ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರಿ ತಾಲೂಕಿನ ಕಳಸ ಸಮೀಪದ ಎಸ್.ಕೆ.ಮೇಗಲ್ ಗ್ರಾಮದ ಚಂದ್ರೇಗೌಡ (55) ಆತ್ಮಹತ್ಯೆಗೆ ಶರಣಾದ ರೈತ. ಚಂದೇಗೌಡ ಅವರ ಅರ್ಧ ಎಕರೆ ಭತ್ತದ ಗದ್ದೆ ಮತ್ತು ಅರ್ಧ ಎಕರೆ ಕಾಫಿ ತೋಟ ನೆರೆಯಿಂದ ಹಾಳಾಗಿತ್ತು. ತೋಟ ಸರಿಪಡಿಸಲು ಕೈ ಸಾಲ ಮಾಡಿಕೊಂಡಿದ್ದರು. ಸಾಲ ಮರುಪಾವತಿ ಮಾಡುವಂತೆ ಸಾಲಗಾರರು ಒತ್ತಾಯಿಸಿದ್ದರು.

ಆದರೆ, ನೆರೆ ಪರಿಹಾರವಾಗಿ ಸರಕಾರ ಯಾವುದೇ ಪರಿಹಾರ ನೀಡಿಲ್ಲ ಈ ಎಲ್ಲಾ ಹಿಂಸೆಗಳನ್ನು ತಾಡಲಾರದೆ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ. ಇನ್ನು ಈ ಸಂಬಂಧ ಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top