fbpx
ಸಮಾಚಾರ

ಪ್ರಿಯಕರನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್‍ವುಡ್ ನಟಿ

ಆ ದಿನಗಳು ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೆ ಪ್ರವೇಶಿಸಿದ್ದ ವೇದಾ ಮೂರ್ನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದಿಂದ ದೂರವೇ ಉಳಿದಿದ್ದರು. ತೆಲುಗು ಬಿಗ್​ಬಾಸ್​ನ ಮೊದಲ ಸೀಸನ್​ನಲ್ಲಿ ಸ್ಪರ್ಧಿಯೂ ಆಗಿದ್ದ ಅರ್ಚನಾ ಶಾಸ್ತ್ರಿ ಇದೀಗ ಸದ್ದಿಲ್ಲದೆ ಎಂಗೇಜ್​ಮೆಂಟ್ ಮಾಡಿಕೊಂಡು ಅಭಿಮಾನಿಗಳಿಗೆ ಸರ್​ಪ್ರೈಸ್​ ನೀಡಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಜಗದೀಶ್ ಜೊತೆಗೆ ನಿನ್ನೆಯಷ್ಟೇ ಅರ್ಚನಾ ಎಂಗೇಜ್ ಆಗಿದ್ದಾರೆ.

ಅರ್ಚನಾ ಅವರು ಜಗದೀಶ್ ಎಂಬವರನ್ನು ಪ್ರೀತಿಸುತ್ತಿದ್ದರು. ಇವರು ಹೆಲ್ತ್ ಕೇರ್ ಕಂಪನಿಯೊಂದರ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಪ್ರೀತಿಯ ವಿಚಾರವನ್ನು ಕುಟುಂಬದವರಿಗೆ ತಿಳಿಸಿದ್ದರು. ನಂತರ ಎರಡೂ ಕುಟುಂಬವು ಒಪ್ಪಿ ಅರ್ಚನಾ ಮತ್ತು ಜಗದೀಶ್ ನಿಶ್ಚಿತಾರ್ಥವನ್ನು ಹೈದರಾಬಾದಿನ ರಾಡಿಸನ್ ಹೋಟೆಲಿನಲ್ಲಿ ಅದ್ಧೂರಿಯಾಗಿ ಮಾಡಿದ್ದಾರೆ. ಮದುವೆ ದಿನಾಂಕವನ್ನು ಮಾತ್ರ ಬಹಿರಂಗಪಡಿಸಿಲ್ಲ.

ನಟಿ ಅರ್ಚನಾ ಕನ್ನಡದಲ್ಲಿ ‘ಮೈತ್ರಿ’ ‘ಮಿಂಚು’ ಮತ್ತು ‘ಮೇಘ ವರ್ಷಿಣಿ’ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇವರು ಕನ್ನಡದಲ್ಲಿ ಮಾತ್ರವಲ್ಲದೇ ತೆಲುಗು ಮತ್ತು ತಮಿಳು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ಅಲ್ಲದೇ ತೆಲುಗಿನ ಬಿಗ್ ಬಾಸ್ ಸೀಸನ್ ಒಂದರಲ್ಲೂ ಅರ್ಚನಾ ಪಾಲ್ಗೊಂಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top