fbpx
ಸಮಾಚಾರ

ಗುಂಪು ಹಲ್ಲೆ ಖಂಡಿಸಿ ಪ್ರಧಾನಿಗೆ ಪತ್ರ ಬರೆದಿದ್ದ ಗಣ್ಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

‘ದೇಶದಲ್ಲಿ ಮುಸ್ಲಿಮರು, ದಲಿತರು ಹಾಗೂ ಇತರ ಅಲ್ಪಸಂಖ್ಯಾತ ಧರ್ಮೀಯರನ್ನು ಬಡಿದು ಸಾಯಿಸಲಾಗುತ್ತಿದೆ. ಇದನ್ನು ನಿಲ್ಲಿಸಲು ಕ್ರಮ ಜರುಗಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ನಿರ್ದೇಶಕ ಮಣಿರತ್ನಂ, ಬೆಂಗಳೂರಿನ ಲೇಖಕ ರಾಮಚಂದ್ರ ಗುಹಾ ಸೇರಿದಂತೆ 50 ಗಣ್ಯರ ವಿರುದ್ಧ ಬಿಹಾರದ ಮುಜಫ್ಫರ್‌ಪುರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪತ್ರ ಬರೆದ ಸೆಲೆಬ್ರಿಟಿಗಳ ವಿರುದ್ಧ ದೇಶದ್ರೋಹ, ಸಾಮಾಜಿಕ ಕಿರುಕುಳ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮತ್ತು ಶಾಂತಿ ಕದಡುವ ಯತ್ನ ಮೊದಲಾದ ಆರೋಪಗಳನ್ನು ಹೊರಿಸಲಾಗಿದೆ.

ಸದಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರುವ ಗಣ್ಯರ ಬಗ್ಗೆ ನಾನು ಸಲ್ಲಿಸಿರುವ ಅರ್ಜಿಯ ಕುರಿತು ಮುಖ್ಯ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಆ.20ರಂದು ಆದೇಶ ಹೊರಡಿಸಿದ್ದರು. ಪತ್ರದಲ್ಲಿ 49 ಗಣ್ಯರ ಸಹಿಗಳನ್ನು ಅರ್ಜಿಯಲ್ಲಿ ಆರೋಪಿಗಳೆಂದು ಹೆಸರಿಸಲಾಗಿದೆ. ಇವರ ಮೇಲೆ ದೇಶದ ಘನತೆಗೆ ಧಕ್ಕೆ ತಂದಿರುವ ಹಾಗೂ ಏಕಾಂತ ಪ್ರವೃತ್ತಿಯನ್ನು ಬೆಂಬಲಿಸುವ ಜೊತೆಗೆ ಪ್ರಧಾನಿ ಮೋದಿಯವರು ಅದ್ಭುತ ಕಾರ್ಯಕ್ಷಮತೆ ದುರ್ಬಲಗೊಳಿಸಿದ್ದಾರೆಂದು ಆರೋಪಿಸಲಾಗಿದೆ ಎಂದು ಓಝ್ಹಾ ಹೇಳಿದ್ದಾರೆ.

ಪತ್ರದಲ್ಲಿ ಏನಿತ್ತು?
ಈ ವರ್ಷದ ಜುಲೈ ತಿಂಗಳಿನಲ್ಲಿ ದೇಶಾದ್ಯಂತ ಹೆಚ್ಚುತ್ತಿರುವ ಕೋಮು ದ್ವೇಷದ ಅಪರಾಧಗಳು ಹಾಗೂ ಗುಂಪು ಹಲ್ಲೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿ 49 ಗಣ್ಯರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದರು.

ಜು. 23ರಂದು ಕಳುಹಿಸಲಾದ ಈ ಪತ್ರಕ್ಕೆ ಇತಿಹಾಸಕಾರ ರಾಮಚಂದ್ರ ಗುಹಾ, ಸಮಾಜಶಾಸ್ತ್ರ ತಜ್ಞ ಆಶಿಸ್ ನಂದಿ, ಚಿತ್ರ ನಿರ್ದೇಶಕರಾದ ಅಡೂರು ಗೋಪಾಲಕೃಷ್ಣನ್, ಅಪರ್ಣ ಸೇನ್, ಶಾಸ್ತ್ರೀಯ ಸಂಗೀತ ಗಾಯಕಿ ಶುಭಾ ಮುದ್ಗಲ್, ಮಣಿರತ್ನಂ, ಅನುರಾಗ್ ಕಶ್ಯಪ್, ಶ್ಯಾಮ್ ಬೆನಗಲ್, ಅನುಪಮ್ ರಾಯ್, ಕೊಂಕಣ್ ಸೇನ್ ಶರ್ಮಾ ಅವರಂತಹ ಚಿತ್ರರಂಗದ ಪ್ರಮುಖರು ಸೇರಿದಂತೆ ಒಟ್ಟು 49 ಮಂದಿ ಈ ಪತ್ರಕ್ಕೆ ಸಹಿ ಮಾಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top