fbpx
ಸಮಾಚಾರ

“ಅವ್ರು ಮಹಾಪರಾಧವೇನೂ ಮಾಡಿಲ್ಲ” ಚಂದನ್-ನಿವೇದಿತಾ ಪರ ಪ್ರತಾಪ್ ಸಿಂಹ ಬ್ಯಾಟಿಂಗ್.

ಗಾಯಕ ಚಂದನ್ ಶೆಟ್ಟಿ ಅವರು ಶುಕ್ರವಾರ ರಾತ್ರಿ ಯುವ ದಸರಾ ಕಾರ್ಯಕ್ರಮದಲ್ಲಿ ಗೆಳತಿ ನಿವೇದಿತಾ ಗೌಡಗೆ ಪ್ರೇಮ ನಿವೇದನೆ ಮಾಡಿರುವ ವಿಚಾರ ಈಗ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ. ನಿನ್ನೆಯ ಕಾರ್ಯಕ್ರಮದ ಮಧ್ಯದಲ್ಲಿ ಚಂದನ್ ಶೆಟ್ಟಿ ಅವರು ತಾನು ನಿವೇದಿತಾ ಅವರನ್ನು ಮದುವೆಯಾಗುತ್ತಿರುವುದಾಗಿ ಘೋಷಿಸಿದರು. ವೇದಿಕೆಯಲ್ಲಿ ಪ್ರೇಕ್ಷಕರ ಸಮ್ಮುಖದಲ್ಲೇ ನಿವೇದಿತಾಗೆ ಪ್ರೊಪೋಸ್ ಮಾಡಿದ ಚಂದನ್ ತನ್ನ ಪ್ರಿಯತಮೆಗೆ ಉಂಗುರ ಕೂಡ ತೊಡಿಸಿ ಆಲಂಗಿಸಿದರು. ಇಬ್ಬರೂ ಪರಸ್ಪರ ಮುತ್ತನ್ನೂ ವಿನಿಮಯ ಮಾಡಿಕೊಂಡಿದ್ದರು.

 

 

ಈ ಮದ್ಯೆ ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಕೂಡ ಮಾತನಾಡಿದ್ದು ಯುವ ಜೋಡಿಯ ಪರವಾಗಿ ಬ್ಯಾಟ್ ಬೀಸಿದ್ದಾರೆ. ‘ಯುವದಸರಾದಲ್ಲಿ 2 ಗಂಟೆ ಮೈಸೂರಿಗರ ಮನಸ್ಸಿಗೆ ಮುದ ಕೊಟ್ಟು 2 ಸೆಕೆಂಡ್ ಪ್ರೇಮ ನಿವೇದನೆ ಮಾಡಿಕೊಂಡ ಚಂದನ್ ಶೆಟ್ಟಿಯವರನ್ನು ಏನೋ ಮಹಾಪರಾಧ ಮಾಡಿದವರಂತೆ ಕಾಣುವುದು ಸಾಕು. ಇಬ್ಬರಿಗೂ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.

ವೇದಿಕೆಯಲ್ಲಿ ನಡೆದಿದ್ದೇನು..?
ನಿನ್ನೆ ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್, ನಿವೇದಿತಾ ಪೋಷಕರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮ ನೀಡಿ ಜನರನ್ನು ಮನರಂಜಿಸುತ್ತಿದ್ದ ಚಂದನ್ ವೇದಿಕೆಯಲ್ಲೇ ನಿವೇದಿತಾಳಿಗೆ ಮಂಡಿಯೂರಿ ಪ್ರಪೋಸ್ ಮಾಡಿದ್ದರು ಅಲ್ಲದೆ ಉಂಗುರ ಕೂಡ ತೊಡಿಸಿದ್ದರು. ಈ ವೇಳೆ ನೆರೆದಿದ್ದ ಮಂದಿ ಶಿಳ್ಳೆ ಹೊಡೆದು ಚಪ್ಪಾಳೆ ತಟ್ಟುವ ಮೂಲಕ ಇಬ್ಬರನ್ನೂ ಅಭಿನಂದಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top