fbpx
ಸಮಾಚಾರ

“ಚಂದನ್-ನಿವೇದಿತಾ ಜೋಡಿಗೆ ಚಾಮುಂಡಿ ತಾಯಿಯೇ 6 ತಿಂಗ್ಳಲ್ಲಿ ಶಿಕ್ಷೆ ನೀಡ್ತಾಳೆ” ಸಚಿವ ವಿ.ಸೋಮಣ್ಣ ಹೇಳಿಕೆ.

ಗಾಯಕ ಚಂದನ್ ಶೆಟ್ಟಿ ಅವರು ಶುಕ್ರವಾರ ರಾತ್ರಿ ಯುವ ದಸರಾ ಕಾರ್ಯಕ್ರಮದಲ್ಲಿ ಗೆಳತಿ ನಿವೇದಿತಾ ಗೌಡಗೆ ಪ್ರೇಮ ನಿವೇದನೆ ಮಾಡಿರುವ ವಿಚಾರ ಈಗ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ. ಮೈಸೂರು ಉಸ್ತುವಾರಿ ಸಚಿವ ವಿ ಸೋಮಣ್ಣಇದರಿಂದ ಕೆಂಡಾಮಂಡಲವಾಗಿದ್ದು ಇದು ಅಕ್ಷಮ್ಯ ಅಪರಾಧ ಎಂದಿದ್ದಾರೆ.

ನಿನ್ನೆಯ ಕಾರ್ಯಕ್ರಮದ ಮಧ್ಯದಲ್ಲಿ ಚಂದನ್ ಶೆಟ್ಟಿ ಅವರು ತಾನು ನಿವೇದಿತಾ ಅವರನ್ನು ಮದುವೆಯಾಗುತ್ತಿರುವುದಾಗಿ ಘೋಷಿಸಿದರು. ವೇದಿಕೆಯಲ್ಲಿ ಪ್ರೇಕ್ಷಕರ ಸಮ್ಮುಖದಲ್ಲೇ ನಿವೇದಿತಾಗೆ ಪ್ರೊಪೋಸ್ ಮಾಡಿದ ಚಂದನ್ ತನ್ನ ಪ್ರಿಯತಮೆಗೆ ಉಂಗುರ ಕೂಡ ತೊಡಿಸಿ ಆಲಂಗಿಸಿದರು. ಇಬ್ಬರೂ ಪರಸ್ಪರ ಮುತ್ತನ್ನೂ ವಿನಿಮಯ ಮಾಡಿಕೊಂಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ದಸರಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಕೆಂಡಾಮಂಡಲವಾಗಿದ್ದಾರೆ. ಸುಸಂಸ್ಕೃತ ವ್ಯಕ್ತಿಯಾಗಿರುವ ಚಂದನ್ ಶೆಟ್ಟಿ ಯುವ ದಸರಾ ವೇದಿಕೆಯನ್ನು ಈ ರೀತಿ ದುರುಪಯೋಗ ಮಾಡಿಕೊಳ್ಳುತ್ತಾನೆಂದು ತಾನು ಭಾವಿಸಿರಲಿಲ್ಲ ಎಂದು ಸೋಮಣ್ಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪೆಸಗಿರುವ ಅವರಿಬ್ಬರಿಗೂ ಬರುವ ಆರು ತಿಂಗಳಲ್ಲಿ ದೇವಿಯೇ ಶಿಕ್ಷೆ ನೀಡುತ್ತಾರೆ. ಈ ರೀತಿ ಆಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದಕ್ಕೆ ದಸರಾ ಉಪಸಮಿತಿ ಕಾರಣವಲ್ಲ. ಈ ಸಂಬಂಧ ಮೈಸೂರು ಜಿಲ್ಲಾ ಅಧೀಕ್ಷಕ ಹಾಗೂ ಯುವ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷರೂ ಆಗಿರುವ ರಿಷ್ಯಂತ್ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾರಿಗೆ ಕಾರಣ ಕೇಳಿ ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಲಾಗುತ್ತದೆ ಎಂದು ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top