fbpx
ಸಮಾಚಾರ

ಧರ್ಮಸ್ಥಳ, ಇಸ್ಕಾನ್‌ ಸಂಸ್ಥೆಗೆ ಇಂದಿರಾ ಕ್ಯಾಂಟೀನ್‌ ಜವಾಬ್ದಾರಿ: ಬಿಎಸ್​ವೈ ಸರ್ಕಾರದ ಹೊಸ ಚಿಂತನೆ!

ಕಡಿಮೆ ಬೆಲೆಯಲ್ಲಿ ಬಡವರಿಗೆ ಊಟ, ತಿಂಡಿ ಪೂರೈಸುವ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ‘ಇಂದಿರಾ ಕ್ಯಾಂಟೀನ್‌’ ಕಾರ್ಯಕ್ರಮದ ನಿರ್ವಹಣೆಯನ್ನು ಧಾರ್ಮಿಕ ಸಂಸ್ಥೆಗಳು ಸೇರಿದಂತೆ ಖಾಸಗಿ ಸಂಸ್ಥೆಗಳಿಗೆ ವಹಿಸಲು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ.

ಸಚಿವರೊಬ್ಬರ ಸಲಹೆ ಮೇರೆಗೆ ಇಂದಿರಾ ಕ್ಯಾಂಟೀನ್ ನಿರ್ವಹಣೆಯ ಜವಾಬ್ದಾರಿಯನ್ನು ಧರ್ಮಸ್ಥಳ, ಹೊರನಾಡು ಮತ್ತು ಇಸ್ಕಾನ್​ ಅಕ್ಷಯ ಪಾತ್ರಾದಂತಹ ಪ್ರತಿಷ್ಠಿತ ಸಂಸ್ಥೆಗಳಿಗೆ ವಹಿಸುವ ಚಿಂತನೆ ನಡೆಸಿದ್ದಾರೆ.

ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ ಅವ್ಯವಹಾರ, ಕಳಪೆ ಗುಣಮಟ್ಟದ ಆಹಾರ ಪೂರೈಕೆ, ತಪ್ಪು ಲೆಕ್ಕ ನೀಡಿಕೆ ಆರೋಪ ಕೇಳಿ ಬರ್ತಿವೆ. ಹೀಗಾಗಿ ಇಂದಿರಾ ಕ್ಯಾಂಟೀನ್​​ಗೆ ಪ್ರಸಾದ ಸ್ಪರ್ಶ ನೀಡೋ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡಲು ಹೊರಟಿದೆ.

ಧರ್ಮಸ್ಥಳ, ಇಸ್ಕಾನ್‌ನಂತಹ ಧಾರ್ಮಿಕ ಸಂಸ್ಥೆಗಳು ಪ್ರತಿ ದಿನ ಸಾವಿರಾರು ಭಕ್ತರಿಗೆ ಶುಚಿ, ರುಚಿಯಾದ ಆಹಾರ ನೀಡುತ್ತಿವೆ. ಹೀಗಾಗಿ ಇವುಗಳಿಗೆ ‘ಇಂದಿರಾ ಕ್ಯಾಂಟೀನ್‌’ ನಿರ್ವಹಣೆ ಜವಾಬ್ದಾರಿ ಕೊಡುವುದರಿಂದ ಜನರು ಆಹಾರವನ್ನು ‘ಪ್ರಸಾದ’ ಎಂದು ಭಾವಿಸುತ್ತಾರೆ. ಆಗ ಆಹಾರ ಪದಾರ್ಥ ವ್ಯರ್ಥವಾಗುವುದಿಲ್ಲ ಎಂಬ ಕಾರಣದಿಂದ ಧಾರ್ಮಿಕ ಸಂಸ್ಥೆಗಳಿಗೆ ವಹಿಸುವುದು ಸೂಕ್ತ ಎಂಬುದು ಸರ್ಕಾರದ ಆಲೋಚನೆಯಾಗಿದೆ ಎಂದು ಸರ್ಕಾರದ ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top