fbpx
ಸಮಾಚಾರ

ಇಲ್ಲಿಯವರೆಗೂ ಚಂದನ್ ನಿವೇದಿತಾ ವಿರುದ್ಧ ದಾಖಲಾಗಿರುವ ದೂರುಗಳೆಷ್ಟು ಗೊತ್ತಾ??

ಗಾಯಕ ಚಂದನ್ ಶೆಟ್ಟಿ ಅವರು ಶುಕ್ರವಾರ ರಾತ್ರಿ ಯುವ ದಸರಾ ಕಾರ್ಯಕ್ರಮದಲ್ಲಿ ಗೆಳತಿ ನಿವೇದಿತಾ ಗೌಡಗೆ ಪ್ರೇಮ ನಿವೇದನೆ ಮಾಡಿರುವ ವಿಚಾರ ಈಗ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ. ನಿನ್ನೆಯ ಕಾರ್ಯಕ್ರಮದ ಮಧ್ಯದಲ್ಲಿ ಚಂದನ್ ಶೆಟ್ಟಿ ಅವರು ತಾನು ನಿವೇದಿತಾ ಅವರನ್ನು ಮದುವೆಯಾಗುತ್ತಿರುವುದಾಗಿ ಘೋಷಿಸಿದರು. ವೇದಿಕೆಯಲ್ಲಿ ಪ್ರೇಕ್ಷಕರ ಸಮ್ಮುಖದಲ್ಲೇ ನಿವೇದಿತಾಗೆ ಪ್ರೊಪೋಸ್ ಮಾಡಿದ ಚಂದನ್ ತನ್ನ ಪ್ರಿಯತಮೆಗೆ ಉಂಗುರ ಕೂಡ ತೊಡಿಸಿ ಆಲಂಗಿಸಿದರು. ಇಬ್ಬರೂ ಪರಸ್ಪರ ಮುತ್ತನ್ನೂ ವಿನಿಮಯ ಮಾಡಿಕೊಂಡಿದ್ದರು.

ಚಂದನ್ ಶೆಟ್ಟಿ ಹಾಗೂ ನಿವೇದಿತಾ ವಿರುದ್ಧ ಮೂರು ದೂರು ದಾಖಲಾಗಿದ್ದು, ದೂರುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮೈಸೂರಿನ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಮೇಲೆ ದೂರು ದಾಖಲು ಮಾಡಿದ್ದಾರೆ. ಸರ್ಕಾರಿ ವೇದಿಕೆ ದುರ್ಬಳಕೆ, ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ಕುರಿತು ಚಂದನ್ ಮೇಲೆ ಕೇಸಾದರೆ, ನಿವೇದಿತಾರಿಂದ ಅತಿಕ್ರಮ ಪ್ರವೇಶ, ಸಂಚುರೂಪಿಸಿ ಪ್ರಚಾರ ಪಡೆದ ಆರೋಪಗಳ ಮೇಲೆ ದೂರು ದಾಖಲು ಮಾಡಲಾಗಿದೆ.

ಈ ಸಂಬಂಧ ಮೈಸೂರಿನಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೋಸಿನ್ ಕಾನ್ ಹೇಳಿಕೆ ನೀಡಿದ್ದು ಸರ್ಕಾರಿ ಕಾರ್ಯಕ್ರಮವನ್ನು ತಪ್ಪಾಗಿ ಬಳಸಿಕೊಂಡಿದ್ದಕ್ಕೆ ಚಂದನ್ ಶೆಟ್ಟಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಇನ್ನು ಯೂತ್ ಕಾಂಗ್ರೆಸ್ ಮಾತ್ರವಲ್ಲದೆ ಕರ್ನಾಟಕ ಪ್ರಜಾಪಾರ್ಟಿ, ಸಾಮಾಜಿಕ ಹೋರಾಟಗಾರ ಗಂಗರಾಜುರಿಂದಲೂ ಚಂದನ್ ಶೆಟ್ಟಿ ಹಾಗೂ ನಿವೇದಿತಾ ವಿರುದ್ಧ ದೂರು ದಾಖಲಾಗಿವೆ.

ವೇದಿಕೆಯಲ್ಲಿ ನಡೆದಿದ್ದೇನು..?
ನಿನ್ನೆ ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್, ನಿವೇದಿತಾ ಪೋಷಕರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮ ನೀಡಿ ಜನರನ್ನು ಮನರಂಜಿಸುತ್ತಿದ್ದ ಚಂದನ್ ವೇದಿಕೆಯಲ್ಲೇ ನಿವೇದಿತಾಳಿಗೆ ಮಂಡಿಯೂರಿ ಪ್ರಪೋಸ್ ಮಾಡಿದ್ದರು ಅಲ್ಲದೆ ಉಂಗುರ ಕೂಡ ತೊಡಿಸಿದ್ದರು. ಈ ವೇಳೆ ನೆರೆದಿದ್ದ ಮಂದಿ ಶಿಳ್ಳೆ ಹೊಡೆದು ಚಪ್ಪಾಳೆ ತಟ್ಟುವ ಮೂಲಕ ಇಬ್ಬರನ್ನೂ ಅಭಿನಂದಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top