fbpx
ಸಮಾಚಾರ

“ಅಧಿಕಾರ ಕಳೆದುಕೊಂಡ ನಂತರ ಕುಮಾರಸ್ವಾಮಿ ಸಿದ್ದರಾಮಯ್ಯ ಹುಚ್ಚರಾಗಿದ್ದಾರೆ” ಸಚಿವ ಈಶ್ವರಪ್ಪ ಹೇಳಿಕೆ

“ರಾಜ್ಯಾಧಿಕಾರ ಕಳೆದುಕೊಂಡ ಮೇಲೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ ಹುಚ್ಚರಾಗುತ್ತಿದ್ದಾರೆ” ಎನ್ನುವ ಮೂಲಕ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತಾಡಿದ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ, ಅಧಿಕಾರ ಹೋದ ಮೇಲೆ ಮಾಜಿ ಸಿಎ ಸಿದ್ದರಾಮಯ್ಯ ಮತ್ತು ಎಚ್​.ಡಿ ಕುಮಾರಸ್ವಾಮಿಗೆ ಹುಚ್ಚು ಹಿಡಿದಿದೆ. ಇಬ್ಬರಿಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ಏನನ್ನೋ ಕಳೆದುಕೊಂಡಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ 2ನೇ ಬಾರಿ ಮುಖ್ಯಮಂತ್ರಿ ಆಗಲಿಲ್ಲ. ವಿರೋಧ ಪಕ್ಷದ ನಾಯಕನಾಗಲು ಈಗ ವಿಲಿವಿಲಿ ಒದ್ದಾಡುತ್ತಿದ್ದಾರೆ. ಅದಕ್ಕಾಗಿ ಟೀಕೆಗಾಗಿ ಟೀಕೆ ಮಾಡುತ್ತಿದ್ದಾರೆ. ಆರ್ಥಿಕ ಪರಿಸ್ಥಿತಿಯ ಬಗ್ಗೆ ಅವರ ಮಾತುಗಳು ನಾಟಕ ಎಂದು ಟೀಕಿಸಿದರು.

ದೇಶಾದ್ಯಂತ ಹಲವು ರಾಜ್ಯಗಳಲ್ಲಿ ನೆರೆ ಹಾವಳಿಯಾಗಿದೆ. ಪ್ರಧಾನಿ ಮೋದಿ ದೇಶ ಸುತ್ತಿದ್ದಾರೆ, ಸೂಕ್ತವಾದಂತ ಪರಿಹಾರ ನೀಡುತ್ತಾರೆ. ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯಗೆ ಏನೇನೂ ಗೊತ್ತಿಲ್ಲ. ಟೀಕೆ ಮಾಡೋದು ಬಿಟ್ಟರೆ ಇಬ್ಬರಿಗೂ ಬೇರೆ ಯಾವುದೇ ಕೆಲಸವಿಲ್ಲ ಎಂದು ಕುಹಕವಾಡಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top