fbpx
ಸಮಾಚಾರ

ಚಂದನ್ ಶೆಟ್ಟಿ- ನಿವೇದಿತಾ ಗೌಡ ಪರ ಬೆಂಬಲಕ್ಕೆ ನಿಂತ ಸಚಿವ ಸಿಟಿ ರವಿ.

ಗಾಯಕ ಚಂದನ್ ಶೆಟ್ಟಿ ಅವರು ಶುಕ್ರವಾರ ರಾತ್ರಿ ಯುವ ದಸರಾ ಕಾರ್ಯಕ್ರಮದಲ್ಲಿ ಗೆಳತಿ ನಿವೇದಿತಾ ಗೌಡಗೆ ಪ್ರೇಮ ನಿವೇದನೆ ಮಾಡಿರುವ ವಿಚಾರ ಈಗ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಯಾಗುತ್ತಿದೆ. ಈ ಮದ್ಯೆ ಬಿಜೆಪಿ ನಾಯಕ ಸಿ.ಟಿ ರವಿ ಅವರು ನಿವೇದಿತಾ ಮತ್ತು ಚಂದನ್ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಡಿವಿಜಿಯವರ ಕಗ್ಗದ ಸಾಲುಗಳನ್ನು ಉಲ್ಲೇಖಿಸಿ ಚಂದನ್ ಮತ್ತು ನಿವೇದಿತಾ ಪರ ಸಿಟಿ ರವಿ ಬ್ಯಾಟಿಂಗ್ ಮಾಡಿದ್ದಾರೆ. ಮಣ್ಣಿನ ಆತುರಕ್ಕಿಂತ ಚಿನ್ನದ ಆತುರ ಲೇಸು, ಚಿನ್ನದ ಆತುರಕ್ಕಿಂತ ಗಂಡು ಹೆಣ್ಣಿನ ಒಲವು ದೊಡ್ಡದು ಎಂದು ಡಿವಿಜಿಯವರು ಹೇಳಿದ್ದಾರೆ. ಹಾಗೆಯೇ ಗಂಡು-ಹೆಣ್ಣಿನ ಒಲವು ತಡೆಯಲು ಸಾಧ್ಯವಿಲ್ಲ, ಅದು ಎಲ್ಲಕ್ಕೂ ಮೀರಿದ್ದು. ಚಂದನ್ ನಿವೇದಿತಾ ವಿಚಾರವನ್ನು ಎಳೆದುಕೊಂಡು ಹೋಗುತ್ತಾ, ಅದಕ್ಕೆ ವಿಪರೀತ ಅರ್ಥ ಕಲ್ಪಿಸುವುದು ಬೇಡ” ಎಂದು ಹೇಳಿದ್ದಾರೆ.

ವೇದಿಕೆಯಲ್ಲಿ ನಡೆದಿದ್ದೇನು..?
ಮೊನ್ನೆ ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್, ನಿವೇದಿತಾ ಪೋಷಕರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮ ನೀಡಿ ಜನರನ್ನು ಮನರಂಜಿಸುತ್ತಿದ್ದ ಚಂದನ್ ವೇದಿಕೆಯಲ್ಲೇ ನಿವೇದಿತಾಳಿಗೆ ಮಂಡಿಯೂರಿ ಪ್ರಪೋಸ್ ಮಾಡಿದ್ದರು ಅಲ್ಲದೆ ಉಂಗುರ ಕೂಡ ತೊಡಿಸಿದ್ದರು. ಈ ವೇಳೆ ನೆರೆದಿದ್ದ ಮಂದಿ ಶಿಳ್ಳೆ ಹೊಡೆದು ಚಪ್ಪಾಳೆ ತಟ್ಟುವ ಮೂಲಕ ಇಬ್ಬರನ್ನೂ ಅಭಿನಂದಿಸಿದರು.

ವೇದಿಕೆ ಮೇಲೆ ಪ್ರಪೋಸ್ ಮಾಡಿದ ನಂತರ ಪರ ವಿರೋಧದ ಮಾತುಗಳು ಜೋರಾಗಿ ಕೇಳಿ ಬಂದಿದ್ದವು. ದಸರಾ ಉಸ್ತುವಾರಿ ಹೊತ್ತಿದ್ದ ವಿ.ಸೋಮಣ್ಣ ಸಹ ಅಸಮಾಧಾನದ ಮಾತುಗಳನ್ನು ಆಡಿದ್ದರು. ನಂತರ ಗಾಯಕ ಚಂದನ್ ಕ್ಷಮೆ ಯಾಚಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top