fbpx
ಸಮಾಚಾರ

“ತಮ್ಮ ಬಣ್ಣ ಬಯಲಾಗುತ್ತೆ ಎಂದು ಮಾಧ್ಯಮಗಳಿಗೆ ನಿರ್ಬಂಧ” ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ನಾಳೆ (ಗುರುವಾರದಿಂದ) ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನಕ್ಕೆ ಖಾಸಗಿ ಟಿವಿ ವಾಹಿನಿಗಳ ಕ್ಯಾಮರಾಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ. ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ರಾಜ್ಯ ಸರಕಾರದ ಈ ನಿರ್ಧಾರ ವ್ಯಾಪಕ ಟೀಕೆಗೆ ಗುರಿಯಾಗಿದೆ. ಹಲವು ವರ್ಷಗಳಿಂದ ನಡೆಯುತ್ತಿದ್ದ ಚಿಂತನೆ ಕೊನೆಗೂ ಕಾರ್ಯರೂಪಕ್ಕೆ ಬಂದಿದೆ. ಆಡಳಿತರೂಢ ಬಿಜೆಪಿ ಸರಕಾರ ಅಧಿವೇಶನದ ವೇಳೆ ದೃಶ್ಯ ಮಾಧ್ಯಮ ಮತ್ತು ಮುದ್ರಣ ಮಾಧ್ಯಮಗಳ ಕ್ಯಾಮರಾಗಳಿಗೆ ನಿರ್ಬಂಧ ಹೇರುವ ವಿವಾದಾತ್ಮಕ ತೀರ್ಮಾನ ತೆಗೆದುಕೊಂಡಿದೆ.

ನೂತನ ನಿಯಮದಲ್ಲಿ ದಿನಪತ್ರಿಕೆ ಹಾಗೂ ಟಿವಿ ವಾಹಿನಿ ವರದಿಗಾರರಿಗೆ ಮಾತ್ರ ವಿಧಾನಸಭೆಯೊಳಗೆ ಪ್ರವೇಶ ನೀಡಲಾಗಿದೆ. ವಾರಪತ್ರಿಕೆ, ಪಾಕ್ಷಿಕ ಹಾಗೂ ಮಾಸಿಕ ಪತ್ರಿಕೆಗಳ ಪ್ರತಿನಿಧಿಗಳಿಗೆ ಗ್ಯಾಲರಿಯಲ್ಲಿಅವಕಾಶ ಕಲ್ಪಿಸಲಾಗುತ್ತಿದೆ.

ಹೀಗಾಗಿ ವಿಧಾನ ಮಂಡಲ ಅಧಿವೇಶನದಲ್ಲಿ ಈ ಎಲ್ಲಾ ವಿಚಾರಗಳನ್ನೂ ಮುಂದಿಟ್ಟು ಪ್ರಶ್ನೆಗಳನ್ನು ಹೆಣೆದು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ರಣತಂತ್ರ ಹೆಣೆಯುತ್ತಿವೆ. ಇವೆಲ್ಲಾ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾದರೆ, ಸರ್ಕಾರದ ವರ್ಚಸ್ಸಿಗೆ ಮತ್ತಷ್ಟು ದಕ್ಕೆಯಾಗಲಿದೆ ಎಂಬುದು ಬಿಜೆಪಿ ಲೆಕ್ಕಾಚಾರ ಎಂಬ ಅಭಿಪ್ರಾಯ ವ್ಯಕ್ತಪವುತ್ತಿದೆ.

ಅಧಿವೇಶನಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಬಿಜೆಪಿ ನಡೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ. “ಇದು ಬಿಜೆಪಿಯ ಅತ್ಯಂತ ತಪ್ಪು ನಿರ್ಧಾರ. ತಮ್ಮ ಬಣ್ಣ ಬಯಲಾಗುತ್ತೆ ಎಂದು ನಿರ್ಬಂಧ ಹಾಕಿದ್ದಾರೆ. ಮಾಧ್ಯಮಗಳಿಗೆ ನಿರ್ಬಂಧ ಹೇರದಂತೆ ನಾಳೆ ಸದನದಲ್ಲೇ ಸ್ಪೀಕರ್​ಗೆ ಮನವಿ ಸಲ್ಲಿಸುತ್ತೇನೆ. ನಿರ್ಬಂಧ ಪ್ರಸ್ತಾವ ನಮ್ಮ ಸರ್ಕಾರದಲ್ಲಿ ಮಾಡಿಲ್ಲ,”

“ಈಗ ಸರ್ಕಾರಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದು ಸರಿಯಲ್ಲ. ಸಭಾಧ್ಯಕ್ಷರು ಯಾರ ಚಿತಾವಣೆಗೆ ಮಾಡಿಕೊಂಡಿದ್ದಾರೋ ಗೊತ್ತಿಲ್ಲ. ಬಿಜೆಪಿಯವರ‌ ನಿಜವಾದ ಬಣ್ಣ ಬಯಲಾಗುತ್ತೆ ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದಾರೆ. ಹೀಗಾಗಿ ನಾನು ನಾಳಿನ ಸದನದಲ್ಲಿ ಈ ಬಗ್ಗೆ ಧ್ವನಿ ಎತ್ತುತ್ತೇನೆ ” ಎಂದು ಎಚ್​ಡಿಕೆ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top