fbpx
ಸಮಾಚಾರ

ಚಂದನ್- ನಿವೇದಿತಾ ವಿರುದ್ಧ ಕ್ರಮ ಕೈಗೊಂಡರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎಚ್ಚರಿಕೆ!

ಗಾಯಕ ಚಂದನ್ ಶೆಟ್ಟಿ ಅವರು ಶುಕ್ರವಾರ ರಾತ್ರಿ ಯುವ ದಸರಾ ಕಾರ್ಯಕ್ರಮದಲ್ಲಿ ಗೆಳತಿ ನಿವೇದಿತಾ ಗೌಡಗೆ ಪ್ರೇಮ ನಿವೇದನೆ ಮಾಡಿರುವ ವಿಚಾರ ಈಗ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಯಾಗುತ್ತಿದೆ. ಈ ಮದ್ಯೆ ಹಿರಿಯ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ನಿವೇದಿತಾ ಮತ್ತು ಚಂದನ್ ಪರವಾಗಿ ಬ್ಯಾಟ್ ಬೀಸಿದ್ದಾರೆ.

ನಾವು ಮದುವೆಯಾಗುತ್ತೇವೆ ಎಂದು ಸಮಾರಂಭದಲ್ಲಿ ಹೇಳಿರುವುದಕ್ಕೆ ಶಾಪ ಹಾಕುವುದು ಸರಿಯಲ್ಲ. ಶಾಪವಿಡುವುದು ಮೂಢನಂಬಿಕೆ. ಅದರಲ್ಲೂ ಅವರ ಮೇಲೆ ಕೇಸು ಹಾಕಲಾಗಿದೆ. ನೀವು ಏನು ಮಾಡಬೇಕು ಅಂದುಕೊಂಡಿದ್ದೀರಾ? ಸ್ಟೇಷನ್​ನಲ್ಲಿ ಕರೆಸಿ ಅವರಿಬ್ಬರನ್ನು ಮದುವೆ ಮಾಡಬೇಕು. ನಾವೆಲ್ಲಾ ಪ್ರೀತಿಯಿಂದ ಅವರನ್ನು ಹರಸಬೇಕು ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

“ಅವರಿಬ್ಬರೂ ಶಾಪ ಹಾಕುವಂತಹ ಕೆಲಸವನ್ನೇನೂ ಮಾಡಿಲ್ಲ. ಪ್ರಪೋಸ್ ಮಾಡಿದ್ದು ಅಕ್ಷಮ್ಯ ಅಪರಾಧ ಅಲ್ಲ. ಇಂತಹ ಸಂಧರ್ಭದಲ್ಲಿ ನಾವೆಲ್ಲ ಪ್ರೀತಿಯಿಂದ ಹರಸಿ ಹಾರೈಸಬೇಕು. ಅವ್ರ ನಡೆಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಇದು ಕೇಸು ದಾಖಲಿಸುವಂತ ಅಪರಾಧವಲ್ಲ. ಕೇಸ್ ಹಾಕಿದ್ರೆ ಪೋಲಿಸರ ವಿರುದ್ಧ ನಾನೇ ಧರಣಿ ಮಾಡುತ್ತೇನೆ. ಚಂದನ್ ಹಾಗೂ ನಿವೇದಿತಾ ವಿರುದ್ಧ ಕ್ರಮ ಕೈಗೊಂಡರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಮಾಡಲಾಗುವುದು” ಎಂದು ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ವೇದಿಕೆಯಲ್ಲಿ ನಡೆದಿದ್ದೇನು..?
ಮೊನ್ನೆ ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್, ನಿವೇದಿತಾ ಪೋಷಕರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮ ನೀಡಿ ಜನರನ್ನು ಮನರಂಜಿಸುತ್ತಿದ್ದ ಚಂದನ್ ವೇದಿಕೆಯಲ್ಲೇ ನಿವೇದಿತಾಳಿಗೆ ಮಂಡಿಯೂರಿ ಪ್ರಪೋಸ್ ಮಾಡಿದ್ದರು ಅಲ್ಲದೆ ಉಂಗುರ ಕೂಡ ತೊಡಿಸಿದ್ದರು. ಈ ವೇಳೆ ನೆರೆದಿದ್ದ ಮಂದಿ ಶಿಳ್ಳೆ ಹೊಡೆದು ಚಪ್ಪಾಳೆ ತಟ್ಟುವ ಮೂಲಕ ಇಬ್ಬರನ್ನೂ ಅಭಿನಂದಿಸಿದರು.

ವೇದಿಕೆ ಮೇಲೆ ಪ್ರಪೋಸ್ ಮಾಡಿದ ನಂತರ ಪರ ವಿರೋಧದ ಮಾತುಗಳು ಜೋರಾಗಿ ಕೇಳಿ ಬಂದಿದ್ದವು. ದಸರಾ ಉಸ್ತುವಾರಿ ಹೊತ್ತಿದ್ದ ವಿ.ಸೋಮಣ್ಣ ಸಹ ಅಸಮಾಧಾನದ ಮಾತುಗಳನ್ನು ಆಡಿದ್ದರು. ನಂತರ ಗಾಯಕ ಚಂದನ್ ಕ್ಷಮೆ ಯಾಚಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top