fbpx
ಸಮಾಚಾರ

ಐಟಿ ದಾಳಿ ಹಿನ್ನಲೆ : ಪರಮೇಶ್ವರ್ ಆಪ್ತ ಸಹಾಯಕ ಆತ್ಮಹತ್ಯೆಗೆ ಶರಣು!

ಐಟಿ ವಿಚಾರಣೆ ಎದುರಿಸುವುದಕ್ಕೆ ಆಗಲ್ಲ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ ಮಾಜಿ ಡಿಸಿಎಂ ಪರಮೇಶ್ವರ್ ಅವರ ಪಿಎ ರಮೇಶ್ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ ಎರಡು ದಿನಗಳಿಂದ ಜಿ. ಪರಮೇಶ್ವರ್ ಒಡೆತನದ ಕಾಲೇಜು ಮತ್ತು ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಈ ವೇಳೆ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು. ಹೀಗಾಗಿ ಐಟಿ ವಿಚಾರಣೆ ಎದುರಿಸಲು ಸಾಧ್ಯವಾಗದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜ್ಞಾನ ಭಾರತಿ ವಿವಿ ಕ್ಯಾಂಪಸ್ ವ್ಯಾಪ್ತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ತಮ್ಮ ಇಬ್ಬರು ಆಪ್ತರಿಗೆ ಕರೆ ಮಾಡಿದ್ದ ರಮೇಶ್ ನಾನು ಬಡವ, ನನ್ನ ಮನೆ ಮೇಲೆ ಐಟಿ ದಾಳಿ ನಡೆದಿದೆ, ಇಷ್ಟು ದಿನ ನಿಯತ್ತಿನಿಂದ ಬದುಕಿದ್ದೇನೆ, ಐಟಿ ಅಧಿಕಾರಿಗಳ ವಿಚಾರಣೆ ಎದುರಿಸಲು ಆಗುತ್ತಿಲ್ಲ, ಸಿಕ್ಕಾಪಟ್ಟೆ ಪ್ರಶ್ನೆ ಮಾಡುತ್ತಾರೆ, ನನ್ನಿಂದ ಇರಲು ಆಗುವುದಿಲ್ಲ ಎಂದು ಹೇಳಿ ನಿನ್ನೆ ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಆತ್ಮಹತ್ಯೆ ಮಾಡಿಕೊಂಡ ರಮೇಶ್​ ಕುಣಿಗಲ್ ಮೂಲದವರಾಗಿದ್ದು, 15 ವರ್ಷ ಕೆಪಿಸಿಸಿಯಲ್ಲಿ ಕಂಪ್ಯೂಟರ್ ಆಪರೇಟರ್​ ಆಗಿ ಕೆಲಸ ಮಾಡಿದ್ದರು. ಕಾಂಗ್ರೆಸ್​​ ಸರ್ಕಾರ ಬಂದ ಬಳಿಕ ಗೃಹ ಸಚಿವರಾದ ಪರಮೇಶ್ವರ್​ ಅವರ ಆಪ್ತ ಸಹಾಯಕರಾಗಿದ್ದರು. ಅಲ್ಲಿಂದ ಪರಮೇಶ್ವರ್ ಡಿಸಿಎಂ ಆದಾಗಲೂ ಮತ್ತು ಮೈತ್ರಿ ಸರ್ಕಾರ ಪತನದ ಬಳಿಕವೂ ರಮೇಶ್​ ಪರಮೇಶ್ವರ್ ಜೊತೆಗಿದ್ದರು ಎಂದು ತಿಳಿದು ಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top