fbpx
ಸಮಾಚಾರ

ಚಂದನ್- ನಿವೇದಿತಾ ಗೌಡ ಲವ್ ಸ್ಟೋರಿಗೆ ಕಿಚ್ಚಾ ಸುದೀಪ್ ಕೊಟ್ರು ಟ್ವಿಸ್ಟ್!

ಗಾಯಕ ಚಂದನ್ ಶೆಟ್ಟಿ ಅವರು ಶುಕ್ರವಾರ ರಾತ್ರಿ ಯುವ ದಸರಾ ಕಾರ್ಯಕ್ರಮದಲ್ಲಿ ಗೆಳತಿ ನಿವೇದಿತಾ ಗೌಡಗೆ ಪ್ರೇಮ ನಿವೇದನೆ ಮಾಡಿರುವ ವಿಚಾರ ಈಗ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಯಾಗುತ್ತಿದೆ. ಈ ಮದ್ಯೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪ್ರೀತಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

”ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ಪ್ರೀತಿ ಅವರಿಗೆ ಸಂಬಂಧಪಟ್ಟಿದ್ದು. ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಇದು ಬಿಗ್ ಬಾಸ್ ಸಾಧ್ಯವಾಗಿದ್ದು ಎಂದು ಹೇಳಲ್ಲ. ಬಿಗ್ ಬಾಸ್ ಬಳಿಕ ಆಗಿರುವ ಬೆಳವಣಿಗೆ. ಆ ಬಗ್ಗೆ ಸಂತೋಷವಿದೆ. ಆದರೆ ಇದು ಬಿಗ್ ಬಾಸ್‍ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಬಿಗ್ ಬಾಸ್ ಮುಗಿದ ಮೇಲೆ ನಡೆದಿರುವುದು ಎಂದು ಪ್ರತಿಕ್ರಿಯಿಸಿದ್ದಾರೆ.

ದಸರಾ ವೇದಿಕೆಯಲ್ಲಿ ನಡೆದಿದ್ದೇನು..?
ಮೊನ್ನೆ ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್, ನಿವೇದಿತಾ ಪೋಷಕರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮ ನೀಡಿ ಜನರನ್ನು ಮನರಂಜಿಸುತ್ತಿದ್ದ ಚಂದನ್ ವೇದಿಕೆಯಲ್ಲೇ ನಿವೇದಿತಾಳಿಗೆ ಮಂಡಿಯೂರಿ ಪ್ರಪೋಸ್ ಮಾಡಿದ್ದರು ಅಲ್ಲದೆ ಉಂಗುರ ಕೂಡ ತೊಡಿಸಿದ್ದರು. ಈ ವೇಳೆ ನೆರೆದಿದ್ದ ಮಂದಿ ಶಿಳ್ಳೆ ಹೊಡೆದು ಚಪ್ಪಾಳೆ ತಟ್ಟುವ ಮೂಲಕ ಇಬ್ಬರನ್ನೂ ಅಭಿನಂದಿಸಿದರು.

ವೇದಿಕೆ ಮೇಲೆ ಪ್ರಪೋಸ್ ಮಾಡಿದ ನಂತರ ಪರ ವಿರೋಧದ ಮಾತುಗಳು ಜೋರಾಗಿ ಕೇಳಿ ಬಂದಿದ್ದವು. ದಸರಾ ಉಸ್ತುವಾರಿ ಹೊತ್ತಿದ್ದ ವಿ.ಸೋಮಣ್ಣ ಸಹ ಅಸಮಾಧಾನದ ಮಾತುಗಳನ್ನು ಆಡಿದ್ದರು. ನಂತರ ಗಾಯಕ ಚಂದನ್ ಕ್ಷಮೆ ಯಾಚಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top