fbpx
ಸಮಾಚಾರ

“ಬಿಜೆಪಿಗೆ ಮತ ನೀಡಿದರೇ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ನೀರು ಬಿಡುತ್ತೇವೆ” ಮಹಾರಾಷ್ಟ್ರ ಪ್ರಚಾರದಲ್ಲಿ ಯಡಿಯೂರಪ್ಪ ಹೇಳಿಕೆ.

ಪ್ರವಾಹದಿಂದಾಗಿ ಇಡೀ ರಾಜ್ಯ ಕಂಗಾಲಾಗಿದ್ದು, ಈ ನಡುವಲ್ಲೇ ರಾಜ್ಯವನ್ನು ನಿರ್ಲಕ್ಷಿಸಿ ಮಹಾರಾಷ್ಟ್ರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗಿದರೂ. ಇದಾವುದಕ್ಕೂ ಕ್ಯಾರೆ ಎನ್ನದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಮತದಾರರ ಮನವೊಲಿಸುವ ಪ್ರಯತ್ನಗಳನ್ನು ಮಾಡಿದ್ದಾರೆ.

ಸಾಂಗ್ಲಿ ಜಿಲ್ಲೆಯ ಜತ್ ಗ್ರಾಮದಲ್ಲಿ ಯಡಿಯೂರಪ್ಪ ಮಾತನಾಡಿದ ಅವರು, ಮಹಾರಾಷ್ಟ್ರ ಬಿಜೆಪಿಗೆ ಮತ ಹಾಕಿ ನಾವು ನಿಮಗೆ ನೀರು ಕೊಡುತ್ತೇವೆ ಎಂದು ಹೇಳಿದ್ದಾರೆ. ಇವತ್ತು ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮಕ್ಕೆ ತಲುಪಿದೆ. ಈ ಗ್ರಾಮದಿಂದ 8-10 ಕಿಮೀ ದೂರದಲ್ಲಿ ಹರಿಯುತ್ತಿರುವ ಬೋರಾ ನದಿಗೆ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ಹರಿಸುವುದರಿಂದ 30-40 ಗ್ರಾಮಗಳಿಗೆ 1 ಲಕ್ಷಕ್ಕೂ ಹೆಚ್ಚು ಜನರಿಗೆ ಇದರಿಂದ ಅನುಕೂಲ ಆಗುತ್ತೆ ಅನ್ನೋದನ್ನು ಕೇಳಿದ್ದೇವೆ.

ಮಹಾರಾಷ್ಟ್ರವೇ ಆಗಲೀ, ಕರ್ನಾಟಕವೇ ಆಗಲೀ ಪ್ರತೀಯೊಬ್ಬರೂ ನೀರು ಪಡೆಯಬೇಕು. ಸೂಕ್ತ ಬೆಲೆಯಲ್ಲಿ ರೈತರಿಗೆ ನೀರು ಒದಗಿಸುವುದು ಮೋದಿಯವರ ಆಶಯವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ನನ್ನಿಂದ ಸಾಧ್ಯವಾಗುವ ಎಲ್ಲಾ ಕೆಲಸಗಳನ್ನು ನಾನು ಮಾಡುತ್ತೇನೆ. ಬಿಜೆಪಿ ಅಭ್ಯರ್ಥಿ ವಿಲಾಸ್ ರಾವ್ ಜಗ್ಪತ್ ಅವರು ಗೆಲವು ಸಾಧಿಸಿದ್ದೇ ಆದರೆ, ಜನತೆಗೆ ಸಹಾಯ ಮಾಡುತ್ತೇನೆ. ಎರಡನೇ ಬಾರಿಯೂ ಫಡ್ನವಿಸ್ ಸಿಎಂ ಆಗುವಂತೆ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಇದೇ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ವಿಜಯಪುರ ಜಿಲ್ಲೆಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು. ರಾಜ್ಯದಲ್ಲಿಯ ಜನರು ಭೀಕರ ಬರಗಾಲದಿಂದ ತತ್ತರಿಸುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಮಹಾರಾಷ್ಟ್ರದ ಜನತೆಗೆ ನೀರು ಹರಿಸುವ ಮಾತುಗಳನ್ನಾಡುವುದು ಎಷ್ಟು ಸರಿ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು ಕಳಸಾ-ಬಂಡೂರಿ ಯೋಜನೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top