fbpx
ಸಮಾಚಾರ

‘ಸಾವರ್ಕರ್‌ಗೆ ಆಮೇಲೆ ಕೊಡುವಿರಂತೆ, ಮೊದಲು ಸಿದ್ದಗಂಗಾ ಶ್ರೀಗೆ ಭಾರತರತ್ನ ನೀಡಿ’ ಮಾಜಿ ಸಿಎಂ ಸಿದ್ದರಾಮಯ್ಯ.

ಹಿಂದುತ್ವ ಪ್ರತಿಪಾದಕ, ವೀರ ಸೇನಾನಿ ಸಾವರ್ಕರ್ ಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಮಹಾರಾಷ್ಟ್ರ ಬಿಜೆಪಿಯ ಚುನಾವಣಾ ಪ್ರಣಾಳಿಕೆ ಬಗ್ಗೆ ರಾಷ್ಟ್ರದಾದ್ಯಂತ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿವೆ. ಬಿಜೆಪಿ ಹಾಗೂ ಬಲಪಂಥೀಯರು ಭಾರತ ರತ್ನ ಪ್ರಶಸ್ತಿಗೆ ಸಾವರ್ಕರ್ ಆರ್ಹರು ಎಂಬಂತೆ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರೆ, ಕಾಂಗ್ರೆಸ್ ಸೇರಿದಂತೆ ಎಡ ಪಂಥೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

 

 

ಈ ವಿಚಾರವಾಗಿ ಇಂದು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, “ಸಾವರ್ಕರ್ ಅವರಿಗೆ ‘ಭಾರತ ರತ್ನ’ ಆ‌ ಮೇಲೆ ಕೊಡುವಿರಂತೆ, ಮೊದಲು ಸಾಮಾಜಿಕ‌ ಸೇವೆಗಾಗಿ ತನ್ನ ಬದುಕನ್ನು ತೇದು ಲಿಂಗೈಕ್ಯವಾಗಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ನೀಡಿ. ಕನಿಷ್ಠ ಈ ಒಂದು ಭರವಸೆಯನ್ನಾದರೂ ಈಡೇರಿಸಿ,” ಎಂದು ಆಗ್ರಹಿಸಿದ್ದಾರೆ.

ಇದಕ್ಕೂ ಮೊದಲು ಮಂಗಳೂರಿನಲ್ಲಿ ಮಾತನಾಡಿದ ಅವರು, ಸಾವರ್ಕರ್ ಮಹಾತ್ಮ ಗಾಂಧಿ ಹತ್ಯೆಯ ಸಂಚುಕೋರರಾಗಿದ್ದು ಅಂಥ ವ್ಯಕ್ತಿಗೆ ಭಾರತ ರತ್ನ ಕೊಡಲು ಬಿಜೆಪಿ ಮುಂದಾಗಿದೆ ಎಂದು ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದರು. ಅಲ್ಲದೆ ಸಾವರ್ಕರ್‌ಗೆ ಭಾರತ ರತ್ನ ಕೊಡುವುದಾದರೆ ಗಾಂಧಿ ಹತ್ಯೆಕೋರ ನಾಥುರಾಮ್ ಗೋಡ್ಸೆಗೂ ಭಾರತ ರತ್ನ ಕೊಟ್ಟು ಬಿಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಸಾವರ್ಕರ್ ಕುರಿತಾದ ಸಿದ್ದರಾಮಯ್ಯ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top