fbpx
ಸಮಾಚಾರ

ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ರಾಮ್ ಚರಣ್ ಪತ್ನಿ

ಮಹಾತ್ಮ ಗಾಂಧಿ 150ನೇ ಜನ್ಮ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಾಲಿವುಡ್ ತಾರೆಯರ ಜೊತೆ ಸಂವಾದ ನಡೆಸಿದ್ದಾರೆ. ಬಾಲಿವುಡ್ ನಂತರ ಜೊತೆ ಮೋದಿ ಇರುವ ಒಂದಿಷ್ಟು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಬಾಲಿವುಡ್ ಚಿತ್ರರಂಗಕ್ಕೆ ಸಿಕ್ಕ ಬೆಂಬಲ ಮತ್ತು ಸಹಕಾರ ದಕ್ಷಿಣ ಭಾರತೀಯ ಚಿತ್ರರಂಗಕ್ಕೆ ಸಿಗುತ್ತಿಲ್ಲ ಎಂದು ಅನೇಕರು ಟೀಕಿಸುತ್ತಿದ್ದಾರೆ.

 

 

ಮೆಗಾಸ್ಟಾರ್ ಚಿರಂಜೀವಿ ಅವರ ಸೊಸೆ, ನಟ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ ಇದರಿಂದ ಬೇಸರಗೊಂಡಿದ್ದು, ಮೋದಿ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಉಪಾಸನಾ ಅವರು ತಮ್ಮ ಟ್ವಿಟರ್ ನಲ್ಲಿ ಒಂದು ಪೋಸ್ಟ್ ಹಾಕುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಜಿ ನಾವು ದಕ್ಷಿಣ ಭಾರತೀಯರು ನಿಮ್ಮನ್ನು ಮೆಚ್ಚಿದ್ದೇವೆ, ಹಾಗೂ ನಿಮ್ಮನ್ನು ಪ್ರಧಾನಿಯಾಗಿ ಪಡೆದಿರುವುದಕ್ಕೆ ಹೆಮ್ಮೆ ಇದೆ. ಆದರೆ ಸಾಂಸ್ಕೃತಿಕ ಐಕಾನ್ ಗಳು ಪ್ರಮುಖ ವ್ಯಕ್ತಿಗಳ ಪ್ರಾತಿನಿಧ್ಯ ಕೇವಲ ಹಿಂದಿ ಸಿನಿಮಾ ಇಂಡಸ್ಟ್ರಿಗೆ ಸೀಮಿತವಾಗಿದೆ ಎನಿಸುತ್ತಿದೆ. ದಕ್ಷಿಣ ಭಾರತದ ಸಿನಿಮಾ ಇಂಡಸ್ಟ್ರಿಯನ್ನು ನಿರ್ಲಕ್ಷ್ಯಿಸಲಾಗಿದೆ” ಎಂದು ಉಪಾಸನಾ ಟ್ವೀಟ್ ನಲ್ಲಿ ಬರೆದಿದ್ದಾರೆ.

ಏನಿದು ಘಟನೆ:
ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ಶನಿವಾರ ಚೇಂಜ್ ವಿಥಿನ್ ಹೆಸರಿನಲ್ಲಿ ಬಾಲಿವುಡ್ ಸೆಲೆಬ್ರಟಿಗಳನ್ನು ಭೇಟಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಶಾರುಖ್ ಖಾನ್, ಅಮೀರ್ ಖಾನ್, ಕಂಗನಾ ರಣಾವತ್, ಜಾಕ್ವೆಲಿನ್ ಫರ್ನಾಂಡೀಸ್ ಸೇರಿ ಹಲವು ಸಿನಿಮಾ ಹಾಗೂ ಕಿರು ತೆರೆಯ ಗಣ್ಯರು ಭಾಗವಹಿಸಿದ್ದರು. ಈ ವಿಷಯವನ್ನು ಪ್ರಧಾನಿ ಮೋದಿ ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top