fbpx
ಸಮಾಚಾರ

ಶಾಸಕ ಜಮೀರ್ ಅಹ್ಮದ್‌ಗೆ ಹೃದಯಾಘಾತ, ಶಸ್ತ್ರ ಚಿಕಿತ್ಸೆ ಯಶಸ್ವಿ!

ಚಾಮರಾಜಪೇಟೆ ಶಾಸಕ ಜಮೀರ್​ ಅಹಮ್ಮದ್​ ಖಾನ್​ ಲಘು ಹೃದಯಾಘಾತಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ., ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಶನಿವಾರ ಬೆಳಗ್ಗೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು ಈ ವೇಳೆ ಅವರಿಗೆ ಲಘು ಹೃದಯಾಘಾತವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ 10 ಗಂಟೆಗೆ ಶಾಸಕರಿಗೆ ಹೃದಯಾಘಾತವಾಗಿದ್ದು, ಕೂಡಲೇ ಆಪ್ತರು ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಮೂಲಗಳ ಪ್ರಕಾರ ಜಮೀರ್ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರಿಗೆ ಸ್ಟೆಂಟ್ ಅಳವಡಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದ್ದು, ನಾಳೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

ಆಸ್ಪತ್ರೆಗೆಯಲ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಸಂಪೂರ್ಣ ವಿಶ್ರಾಂತಿ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ. ವಿಕ್ರಮ ಆಸ್ಪತ್ರೆಗೆ ದಾಖಲಾಗಿರುವ ಜಮೀರ್ ಅವರನ್ನು ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಜಮೀರ್ ಅಹಮ್ಮದ್ ಖಾನ್ ಇತ್ತೀಚೆಗೆ ಜಿಮ್ ಸೇರಿಕೊಂಡಿದ್ದರು. ಜಿಮ್‌ನಲ್ಲಿ ವರ್ಕ್‌ಔಟ್ ಮಾಡಿಕೊಳ್ಳುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top