fbpx
ಸಮಾಚಾರ

ಐಪಿಎಲ್‌ ಪಂದ್ಯಗಳ ಮೊದಲು ರಾಷ್ಟ್ರಗೀತೆ?

13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಕೆಲವೇ ತಿಂಗಳುಗಳಷ್ಟೆ ಬಾಕಿ ಉಳಿದಿವೆ. ಡಿಸೆಂಬರ್ 19 ರಂದು ಕೋಲ್ಕತ್ತಾದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಭರ್ಜರಿ ತಯಾರಿಯಲ್ಲಿ ಬ್ಯುಸಿಯಾಗಿದೆ. ಈ ನಡುವೆ ಕಿಂಗ್ಸ್​ ಇಲೆವೆನ್ ಪಂಜಾಬ್ ತಂಡ ಐಪಿಎಲ್ ವೇಳೆ ರಾಷ್ಟ್ರಗೀತೆಯನ್ನು ಹಾಡಬೇಕು ಎಂದು ಬಿಸಿಸಿಐಗೆ ವಿಶೇಷವಾಗಿ ಮನವಿ ಮಾಡಿದೆ.

ಸಾಮಾನ್ಯವಾಗಿ ಅಂತಾರಾಷ್ಟ್ರೀಯ ಪಂದ್ಯ ಆರಂಭವಾಗುವ ಮುನ್ನ ಪ್ರತಿಯೊಂದು ತಂಡಗಳು ತಮ್ಮ ತಮ್ಮ ದೇಶದ ರಾಷ್ಟ್ರಗೀತೆಗಳನ್ನು ಹಾಡುವುದು ವಾಡಿಕೆ. ಅದರಂತೆ, ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲೂ ಪಂದ್ಯಕ್ಕೂ ಮುನ್ನ ರಾಷ್ಟ್ರಗಿತೆಯನ್ನು ಪ್ರತಿಯೊಂದು ಹಾಡಬೇಕು ಎಂಬುದು ವಾಡಿಯಾ ಅವರ ಇಂಗಿತವಾಗಿದೆ.

“ಈ ಕುರಿತು ನಾನು ಈ ವಿಚಾರವಾಗಿ ಈ ಮುಂಚೆಯೇ ಬಿಸಿಸಿಐಗೆ ಪತ್ರ ಬರೆದಿದ್ದೆ. ಆದರೆ ಈಗ ನೇರವಾಗಿ ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ ಅವರಿಗೆ ಪತ್ರ ಬರೆದಿದ್ದೇನೆ. ರಾಷ್ಟ್ರಗೀತೆಯನ್ನು ನಮ್ಮ ದೇಶದಲ್ಲಿ ಇಂಡಿಯನ್ ಸೂಪರ್ ಲೀಗ್ (ಫುಟ್ಬಾಲ್) ಮತ್ತು ಪ್ರೊ-ಕಬ್ಬಡಿ ಲೀಗ್ ಪಂದ್ಯಗಳ ಆರಂಭಕ್ಕೂ ಮುನ್ನ ಹಾಡಿಸುತ್ತಾರೆ. ಹೊರ ದೇಶಗಳಲ್ಲೂ ಕೂಡ ಈ ವಿಧಾನ ಜಾರಿಯಲ್ಲಿದೆ. ಆದ್ದರಿಂದ ಐಪಿಎಲ್ ಲೀಗ್‍ನಲ್ಲೂ ಈ ವಿಧಾನ ಜಾರಿಗೆ ತರಬೇಕು ಎಂದು ವಾಡಿಯಾ ಮನವಿ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top