fbpx
ಸಮಾಚಾರ

“ಅಯೋಧ್ಯೆ ತೀರ್ಪು ಯಾರದ್ದೇ ಸೋಲು ಅಥವಾ ಗೆಲುವಲ್ಲ” ಸಿಎಂ ಯಡಿಯೂರಪ್ಪ

ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ರಾಮನ ದೇವಾಲಯದ ಬಗ್ಗೆ ಐವರು ನ್ಯಾಯಾಧೀಶರು ಸರ್ವಾನುಮತದ ತೀರ್ಪು ನೀಡಿ, ರಾಮಜನ್ಮಭೂಮಿಯಲ್ಲಿ ರಾಮನ ದೇವಾಲಯ ನಿರ್ಮಿಸಲು ಹಸಿರು ನಿಶಾನೆ ತೋರಿದ್ದಾರೆ. ಇದೇ ವೇಳೆ ಅಯೋಧ್ಯೆಯಲ್ಲಿಯೇ ಮುಸ್ಲಿಮರಿಗೆ ಬೇರೆಡೆ 5 ಎಕರೆ ಭೂಮಿ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.

 

 

ದೇಶಾದ್ಯಂತ ಜನ ಸುಪ್ರೀಂ ತೀರ್ಪನ್ನು ಸ್ವಾಗತಿಸುತ್ತಿದ್ದಾರೆ. ಹಾಗೆಯೇ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೀರ್ಪನ್ನು ಗೌರವಿಸೋಣ ಎಂದಿದ್ದಾರೆ.

ತೀರ್ಪು ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ‌ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸುಪ್ರೀಂ ತೀರ್ಪನ್ನು ಗೌರವಪೂರ್ವಕವಾಗಿ ಸ್ವಾಗತಿಸಿದ್ದು, ಅಯೋಧ್ಯೆ ವಿವಾದದ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸಿಸೋಣ. ಇದು ಯಾರೊಬ್ಬರ ಗೆಲುವು ಅಥವಾ ಸೋಲು ಎಂದು ಭಾವಿಸಬೇಡಿ. ಉದ್ವೇಗಕ್ಕೆ ಒಳಗಾಗಬೇಡಿ, ಯಾರೂ ವಿಜೃಂಭಿಸಬೇಡಿ. ಸಮಾಜದ ಸಾಮರಸ್ಯ ಕದಡದೆ, ಶಾಂತಿ ಕಾಪಾಡಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top