fbpx
ಸಮಾಚಾರ

ಅಯೋಧ್ಯೆ ತೀರ್ಪು ಪ್ರಕಟ: ರಾಮ ಮಂದಿರ ನಿರ್ಮಾಣಕ್ಕೆ ‘ಸುಪ್ರೀಂ’ ಗ್ರೀನ್ ಸಿಗ್ನಲ್

ಇಡೀ ಭಾರತ ಎದುರು ನೋಡುತ್ತಿದ್ದ ಅಯೋಧ್ಯೆ ವಿವಾದಕ್ಕೆ ಅಂತ್ಯ ಹಾಡಿರುವ ಸುಪ್ರೀಂಕೋರ್ಟ್, ಐತಿಹಾಸಿಕ ತೀರ್ಪು ನೀಡಿದೆ. ವಿವಾದಿತ ಪ್ರದೇಶದಲ್ಲಿ ಮಂದಿನ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ವಿವಾದಿತ 2.77 ಎಕರೆ ಭೂಮಿ ರಾಮಮಂದಿರ ನಿರ್ಮಾಣಕ್ಕೆ ಸಿಕ್ಕಂತಾಗಿದೆ. ಪರ್ಯಾಯ ಜಮೀನಿನಲ್ಲಿ ಮಸೀದಿ ನಿರ್ಮಿಸಿದ್ದು ಸುನ್ನಿ ವಕ್ಫ್ ಬೋರ್ಡ್ ಗೆ ಬಿಟ್ಟಿದ್ದು ಎಂದು ಪೀಠ ಹೇಳಿದೆ.

ಶನಿವಾರ ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ದೇಶದಾದ್ಯಂತ ಭಾರೀ ಕುತೂಹಲ ಸೃಷ್ಟಿಯಾಗಿತ್ತು. ಕೊನೆಗೂ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿಗಳಾದ ಎಸ್.ಎ ಬೋಬ್ಡೆ, ಡಿ ವೈ ಚಂದ್ರಚೂಡ್, ಅಶೋಕ್ ಭೂಷನ್, ಎಸ್ ಅಬ್ದುಲ್ ನಝೀರ್ ಒಳಗೊಂಡ ಪೀಠ ಈ ಮಹತ್ವದ ತೀರ್ಪನ್ನು ನೀಡಿದೆ.. ಜನರ ಧಾರ್ಮಿಕ ನಂಬಿಕೆಗಳನ್ನು ಗೌರವಿಸ್ತೇವೆ. ಪೂಜೆ ಮಾಡುವವರ ಹಕ್ಕನ್ನು ಮಾನ್ಯ ಮಾಡಿದ್ದೇವೆ ಎಂದು ತಿಳಿಸಿದೆ.

ರಾಮಮಂದಿರ ನಿರ್ಮಾಣದ ಹೊಣೆ ಕೇಂದ್ರ ಸರ್ಕಾರಕ್ಕೆ ನೀಡಿದ್ದು, ರಾಮ ಮಂದಿರ ನಿರ್ಮಿಸಲು ನಿಯಮ ರೂಪಿಸಿ ಎಂದು ಸೂಚಿಸಿದೆ. ರಾಮಜನ್ಮಭೂಮಿಯ ಸ್ವಾಧೀನವನ್ನು ಟ್ರಸ್ಟ್ ಗೆ ನೀಡಬೇಕು. ಸುನ್ನಿ ವಕ್ಫ್ ಬೋರ್ಡ್ ಗೆ ಮಸೀದಿ ನಿರ್ಮಾಣಕ್ಕೆ ಅಯೋಧ್ಯೆಯಲ್ಲೇ ಸೂಕ್ತ ಸ್ಥಳ ನೀಡಬೇಕು ಎಂದು ಐತಿಹಾಸಿಕ ತೀರ್ಪು ನೀಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top