fbpx
ಸಮಾಚಾರ

ಅಯೋಧ್ಯೆ ತೀರ್ಪು- ಸಾಮಾಜಿಕ ಜಾಲತಾಣಗಳಲ್ಲಿ ಪಾಲಿಸಲೇಬೇಕಾದ ಸೂಚನೆಗಳು

ವಿವಾದಿತ ಬಾಬ್ರಿ ಮಸೀದಿ ಮತ್ತು ರಾಮ ಜನ್ಮಭೂಮಿ ತೀರ್ಪು ಹೊರಬರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಸಾಮಾಜಿಕ ಜಾಲತಾಣ ಬಳಕೆದಾರರಿಗೆ ನೀಡಿದ ಸೂಚನೆ ಇಲ್ಲಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು-ಸುದ್ದಿ ಹರಡದಂತೆ ಸೂಚನೆ ನೀಡಿದ್ದಾರೆ. ಪರ-ವಿರೋಧ ತೀರ್ಪು ಬಂದರೆ ವಿಜಯೋತ್ಸವ ಆಚರಿಸುವುದಾಗಲೀ ಅಥವಾ ಘೋಷಣೆ ಕೂಗುವುದನ್ನಾಗಲಿ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರಿಗೆ ಸೂಚನೆಗಳು:
೧.ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಧರ್ಮಕ್ಕೆ ಸಂಬಂಧಿಸಿ ಆಕ್ಷೇಪಾರ್ಹ ವೀಡಿಯೋ ಪೋಸ್ಟ್‌ ಹಾಕಬಾರದು

೨.ಯಾವುದೇ ರಾಜಕೀಯ ಮತ್ತು ಧಾರ್ಮಿಕ ವಿಷಯದ ಬಗ್ಗೆ ನಿಂದನೀಯ ಸಂದೇಶಗಳನ್ನು ಕಳುಹಿಸುವುದು, ರವಾನಿಸುವುದು ಅಪರಾಧವಾಗಿದ್ದು ಇದನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು.

೩. ಕಾನೂನು ಸುವ್ಯವಸ್ಥೆಗೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವಂತಹ ಸಂದೇಶಗಳನ್ನು ಹಾಕಬೇಡಿ.

೪. ಸಾಮಾಜಿಕ ಜಾಲತಾಣಗಳಲ್ಲಿ ಗ್ರೂಪ್ ಸದಸ್ಯರು ಕಾನೂನು ಸುವ್ಯವಸ್ಥೆಗೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡುವು ಸಂದೇಶಗಳನ್ನು ಬೇರೆಯವರಿಗೆ ಕಳುಹಿಸಬಾರದು. ಜೊತೆಗೆ ಬೇರೆಯವರಿಂದ ಬಂದಂತಹ ಪ್ರಚೋದನಾತ್ಮಕ ಸಂದೇಶಗಳನ್ನು ವಿವಿಧ ಗ್ರೂಪ್ ಗಳಿಗೆ ರವಾನಿಸುವುದು ಕಂಡುಬಂದಲ್ಲಿ ಸಂದೇಶ ಕಳುಹಿಸಿದ ವ್ಯಕ್ತಿ ಮತ್ತು ಗ್ರೂಪ್ ಅಡ್ಮಿನ್ ಗಳನ್ನು ನೇರ ಹೊಣೆ ಮಾಡಲಾಗುವುದು.

೫. ಈ ವಿಚಾರವು ದೇಶದ ಸಾರ್ವಭೌಮತ್ವ ಹಾಗೂ ಸೌಹಾರ್ದತೆಗೆ ನೇರವಾಗಿ ಪರಿಣಾಮ ಬೀರುವಂತಹ ವಿಚಾರವಾದ್ದರಿಂದ ಯಾವುದೇ ತಪ್ಪು ಸಂದೇಶವನ್ನು ರವಾನಿಸಬೇಡಿ.

೬.ಸಾಮಾಜಿಕ ಜಾಲತಾಣಗಳಿಗೆ ಸಂಬಂಧಿಸಿದಂತೆ ಕಟ್ಟು ನಿಟ್ಟಿನಿಂದ ನಿಯಮಗಳು ಅನ್ವಯವಾಗಲಿದ್ದು, ಫೇಸ್‍ಬುಕ್, ಇನ್‍ಸ್ಟಾಗ್ರಾಮ್, ವಾಟ್ಸಾಪ್, ಟ್ವಿಟ್ಟರ್ ಹಾಗೂ ಇನ್ನಿತರೆ ಜಾಲತಾಣಗಳ ಮೇಲೆ ಸೂಕ್ತ ನಿಗಾವಹಿಸಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top