fbpx
ಸಮಾಚಾರ

ಅಯೋಧ್ಯೆ ತೀರ್ಪು ನೀಡಿದ ಪಂಚ ಸದಸ್ಯ ಪೀಠದ ನ್ಯಾ. ಅಬ್ದುಲ್ ನಜೀರ್ ನಮ್ಮ ಕನ್ನಡಿಗರು!

ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ರಾಮನ ದೇವಾಲಯದ ಬಗ್ಗೆ ಐವರು ನ್ಯಾಯಾಧೀಶರು ಸರ್ವಾನುಮತದ ತೀರ್ಪು ನೀಡಿ, ರಾಮಜನ್ಮಭೂಮಿಯಲ್ಲಿ ರಾಮನ ದೇವಾಲಯ ನಿರ್ಮಿಸಲು ಹಸಿರು ನಿಶಾನೆ ತೋರಿದ್ದಾರೆ. ಇದೇ ವೇಳೆ ಅಯೋಧ್ಯೆಯಲ್ಲಿಯೇ ಮುಸ್ಲಿಮರಿಗೆ ಬೇರೆಡೆ 5 ಎಕರೆ ಭೂಮಿ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.

ಈ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ನ ಪಂಚಪೀಠವೂ ಸಿಜೆಐ ರಂಜನ್ ಗೋಗೊಯಿ, ಜಸ್ಟೀಸ್ ಎಸ್ ಎ ಬೋಬ್ಡೆ, ಜಸ್ಟೀಸ್ ಡಿವೈ ಚಂದ್ರಚೂಡ್, ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ಜಸ್ಟೀಸ್ ಅಬ್ದುಲ್ ನಝೀರ್ ಸದಸ್ಯರನ್ನು ಒಳಗೊಂಡಿತ್ತು. ಪಂಚಪೀಠದ ಸದಸ್ಯರಲ್ಲಿ ಒಬ್ಬರಾಗಿರುವ ನ್ಯಾಯಮೂರ್ತಿ ಅಬ್ದುಲ್ ನಜೀರ್ ಕರಾವಳಿಯವರು. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಸಮೀಪದ ಬೆಳುವಾಯಿ ಅವರ ಹುಟ್ಟೂರು.

1958ರ ಜನವರಿ ಐದರಂದು ಜನಿಸಿದ ಎಸ್ ಎ ನಜೀರ್ ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದರು. ನಂತರ ಮಂಗಳೂರಿನ ಎಸ್ ಡಿಎಂ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ಧಾರೆ. 1983ರಲ್ಲಿ ಅಬ್ದುಲ್ ನಜೀರ್ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ಅಭ್ಯಾಸ ಆರಂಭಿಸಿದರು. 2003ರವರೆಗೆ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ವಕೀಲರಾಗಿ ಕಾರ್ಯ ನಿರ್ವಹಿಸಿದ್ದರು. 2003ರಲ್ಲಿ ಹೈಕೋರ್ಟ್ ನ ನ್ಯಾಯಾಧೀಶರಾಗಿ ಆಯ್ಕೆಯಾದ ಇವರು 2017ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕವಾಗಿದ್ದರು.

ಸಿಜೆಐ ಮಿಶ್ರಾ ಅಯೋಧ್ಯಾ ಪ್ರಕರಣ ಇತ್ಯರ್ಥಕ್ಕೆ ನೇಮಿಸಿದ ಮೂರು ನ್ಯಾಯಧೀಶರ ಪೀಠದಲ್ಲಿಯೂ ಇವರಿದ್ದರು. 2017ರಲ್ಲಿ ತ್ರಿವಳಿ ತಲಾಖ್‌ಗೆ ಸಂಬಂಧಿಸಿದಂತೆ ನೀಡಿದ ತೀರ್ಪಿನಲ್ಲಿ ಅಲ್ಪಮತದ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರಲ್ಲಿ ಇವರೂ ಒಬ್ಬರು. ಆಧಾರ್ ಪ್ರೈವೇಸಿಗೆ ಸಂಬಂಧಿಸಿದಂತೆ ತೀರ್ಪು ನೀಡಿದ ಪೀಠದಲ್ಲಿ ಇವರಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top