fbpx
ಸಮಾಚಾರ

ಕರ್ತಾರ್‌ಪುರ್ ಕಾರಿಡಾರ್: ಪಾಕ್ ಪ್ರಧಾನಿ ಇಮ್ರಾನ್‌ಗೆ ಧನ್ಯವಾದ ಅರ್ಪಿಸಿದ ಮೋದಿ!

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರ್ವಾಲ್ ಜಿಲ್ಲೆಯಲ್ಲಿರುವ ಸಿಖ್ ಸಮುದಾಯದ ಪವಿತ್ರ ಕ್ಷೇತ್ರ ಗುರುದ್ವಾರ ದರ್ಬಾರ್ ಸಾಹಿಬ್ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಭಾರತ-ಪಾಕಿಸ್ತಾನ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕರ್ತಾರ್​ಪುರ್​ ಕಾರಿಡಾರ್​ ಯೋಜನೆಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಿದರು.

ಕರ್ತಾರ್‍ಪುರ್ ಕಾರಿಡಾರ್ ಉದ್ಘಾಟಿಸಿ ಮಾತನಾಡಿದ ಅವರು, ಈ ಸನ್ಮಾನವನ್ನು ಗುರುನಾನಕ್ ಅವರ ಚರಣಗಳಿಗೆ ಸಮರ್ಪಿಸುತ್ತೇನೆ. ಸೇವಾ ಭಾವವನ್ನು ಇನ್ನೂ ಹೆಚ್ಚು ದಿನಗಳ ಕಾಲ ನೀಡು ಎಂದು ಬೇಡುತ್ತೇನೆ. ನೀವು ಸಹ ಸೇವೆಯನ್ನು ಮಾಡಲು ಅನುಮತಿ ನೀಡಿ. ಕರ್ತಾರ್‍ಪುರ್ ಚೆಕ್‍ಪೋಸ್ಟ್ ಕಾರ್ತಿಕ ಪೂರ್ಣಿಮೆಯ ಪರ್ವದಲ್ಲಿ ತೆರೆಯುತ್ತಿದೆ. ಇದರಿಂದ ದೀಪಾವಳಿ ಇನ್ನೂ ಜಗಮಗಿಸುವಂತಾಗಿದೆ ಎಂದರು.

“ಇದೆ ವೇಳೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಭಾರತದ ಯಾತ್ರಾರ್ಥಿಗಳ ಭಾವನೆಯನ್ನು ಗೌರವಿಸಿದ್ದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಅಲ್ಲದೆ ಈ ಯೋಜನೆಗೆ ಸಹಕರಿಸುತ್ತಿರುವ ಪಾಕಿಸ್ತಾನದ ಕಾರ್ಯಕರ್ತರಿಗೂ ಕೂಡ ಧನ್ಯವಾದ ಅರ್ಪಿಸುತ್ತೇನೆ” ಎಂದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top