fbpx
ಸಮಾಚಾರ

ಹಿರಿಯ ಗಾಯಕಿ ಲತಾಮಂಗೇಶ್ಕರ್ ಆಸ್ಪತ್ರೆಗೆ ದಾಖಲು – ಆರೋಗ್ಯ ಸ್ಥಿತಿ ಗಂಭೀರ!

ಬಾಲಿವಡ್​ನ ಶ್ರೇಷ್ಠ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಗಂಭೀರ ಸ್ವರೂಪದಲ್ಲಿ ಉಸಿರಾಟದ ತೊಂದರೆ ಎದುರಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲತಾಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದ ಅತ್ಯಂತ ಜನಪ್ರಿಯ ಗಾಯಕಿ ಎನಿಸಿರುವ ಲತಾ ಮಂಗೇಶ್ಕರ್ ಅವರು ಬಹುಭಾಷಾ ಗಾಯಕಿಯಾಗಿದ್ದಾರೆ. ಹಿಂದಿ ಭಾಷೆಯೊಂದರಲ್ಲೇ 1 ಸಾವಿರಕ್ಕೂ ಹೆಚ್ಚು ಹಾಡುಗಳನ್ನ ಹಾಡಿದ್ದಾರೆ. ಇದು ದಾಖಲೆಯಾಗಿದೆ. 1929, ಸೆ. 28ರಂದು ಜನಿಸಿದ ಲತಾ ಮಂಗೇಶ್ಕರ್ ಹಿಂದಿ ಸೇರಿ 36ಕ್ಕೂ ಹೆಚ್ಚು ಭಾಷೆಗಳಲ್ಲಿ ಗಾಯನ ಮಾಡಿದ್ದಾರೆ. ಅವರ ಸಾಧನೆ ಪರಿಗಣಿಸಿ ಭಾರತ ರತ್ನ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಲಬ್ಯವಾಗಿವೆ. ಫ್ರಾನ್ಸ್ ದೇಶದ ಅತ್ಯುಚ್ಚ ನಾಗರಿಕ ಪ್ರಶಸ್ತಿಯ ಗರಿಯೂ ಅವರಿಗೆ ಇದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top