fbpx
ಸಮಾಚಾರ

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಪವಿತ್ರ ಗದ್ದುಗೆ ಮೇಲೆ ವಿಶೇಷ ಶಿವಲಿಂಗ ಪ್ರತಿಷ್ಠಾಪನೆ

ಸಿದ್ದಗಂಗೆಯ ಶಿವೈಕ್ಯ ಶತಾಯುಷಿ ಶಿವಕುಮಾರ ಶ್ರೀಗಳ ಐಕ್ಯ ಸ್ಥಳದ ಮೇಲೆ ಇಂದು ಶಿವಲಿಂಗ ಪ್ರತಿಷ್ಠಾಪನೆಯಾಗಿದೆ. ಇಂದು ಬೆಳಗ್ಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಯ ಪೀಠದ ಮೇಲೆ ಶಿವಲಿಂಗ ಪ್ರತಿಷ್ಠಾಪನೆ ಮಾಡಲಾಯಿತು. ಲಿಂಗ ಪ್ರತಿಷ್ಠಾಪನಾ ಕಾರ್ಯಕ್ರಮ ಕಣ್ಣು ತುಂಬಿಕೊಳ್ಳಲು ನಾಡಿನ ವಿವಿಧೆಡೆಗಳಿಂದ ಭಕ್ತಾದಿಗಳು ಸಮೂಹ ಬಂದಿತ್ತು.

27 ಇಂಚು ಉದ್ದ ಇರುವಂತಹ ಶಿವಲಿಂಗವನ್ನು ಈಗಾಗಲೇ ಅವರ ಗದ್ದುಗೆಯ ಮೇಲೆ ಇರಿಸಲಾಗಿರುವ ಪೀಠದಮೇಲೆ ಇಂದು (ನವೆಂಬರ್ 11) ಬೆಳಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಸರ್ವ ವಿಧಿ ವಿಧಾನಗಳೊಂದಿಗೆ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ನೇತೃತ್ವದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

ಲಿಂಗವನ್ನು ಶ್ರೀಗಳು ತಂಗುತ್ತಿದ್ದ ಹಳೆ ಮಠದಲ್ಲಿ ಮಂಡಳದ 48 ದಿನಗಳ ಕಾಲ ಜಲಾಧಿವಾಸ, ಧಾನ್ಯಾಧಿವಾಸ, ಪುಷ್ಪಾಧಿವಾಸ ಹಾಗೂ ಶಯನಾಧಿವಾಸದ ವಿಧಿವಿಧಾನ ಪೂರೈಸಲಾಗಿತ್ತು. ಹೀಗೆ ಸಕಲ ವಿಧಾನ ಪೂರೈಸಿ ದೈವೀ ಶಕ್ತಿಯನ್ನು ಪಡೆದ ಪವಿತ್ರ ಲಿಂಗವನ್ನು ಶ್ರೀಗಳ ಗದ್ದುಗೆಯ ಪೀಠದ ಮೇಲೆ ಇರಿಸಲಾಗಿದೆ. ಅಂದಹಾಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಕುಮಾರ್ ಸ್ವಾಮೀಜಿ ಅವರು 2019 ಜನವರಿ 21 ರಂದು ಬೆಳಗ್ಗೆ ಸ್ವಾಮೀಜಿ ಲಿಂಗೈಕ್ಯರಾಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top