fbpx
ಸಮಾಚಾರ

ಅಂತರಾಷ್ಟ್ರೀಯ ಪ್ರಶಸ್ತಿ: ರಾಕಿಂಗ್ ಸ್ಟಾರ್ ಯಶ್​ಗೆ ಮತ್ತೊಂದು ಗೌರವ

ಕೆಜಿಎಫ್ ಸಿನಿಮಾ ತೆರೆಕಂಡ ನಂತರ ರಾಕಿಂಗ್ ಸ್ಟಾರ್ ಯಶ್ ಅದೃಷ್ಟ ಖುಲಾಯಿಸಿದೆ. ರಾಜ್ಯ, ರಾಷ್ಟ್ರಮಟ್ಟದಲ್ಲಿ ಅನೇಕ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದ ಕೆಜಿಎಫ್​ ಸಿನಿಮಾ ನಟನೆಗಾಗಿ ಯಶ್​ಗೂ ಪ್ರಶಸ್ತಿ ಸಿಕ್ಕಿತ್ತು. ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲೂ ಯಶ್ ಕಪ್ಪು ಸುಂದರಿಯನ್ನು ಎತ್ತಿ ಹಿಡಿದಿದ್ದರು. ಇದೀಗ ರಾಕಿಂಗ್ ಸ್ಟಾರ್ ಯಶ್​ಗೆ ಮತ್ತೊಂದು ಗೌರವ ಸಿಕ್ಕಿದೆ.

 

 

ಅಮೆರಿಕಾದ ನ್ಯೂಯಾರ್ಕ್ ಮೂಲದ ಅಂತರಾಷ್ಟ್ರೀಯ ಜಿ ಕ್ಯೂ ಪುರುಷರ ಮಾಸ ಪತ್ರಿಕೆ, ದಿ ಜಿ ಕ್ಯೂ ಇಂಡಿಯಾ ಆಯೋಜಿಸಿದ್ದ, 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ. ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 Most Influential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ.

ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ, ಯೋಜನೆಯನ್ನು ಪರಿಗಣಿಸಿ, ಭಾರತದ 50 ಶ್ರೇಷ್ಠ ಯುವ ಪ್ರಭಾವಶಾಲಿಗಳಿಗೆ ಜಿಕ್ಯೂ ಇಂಡಿಯಾ ಪ್ರಶಸ್ತಿ ನೀಡಿ ಗೌರವಿಸಿದೆ.

ಜಿಕ್ಯೂ ಪ್ರಶಸ್ತಿ ಬಂದಿದ್ದಕ್ಕೆ ತುಂಬಾ ಖುಷಿಯಾಗುತ್ತಿದೆ. ಬೇರೆ ಬೇರೆ ಕ್ಷೇತ್ರಗಳಿಂದ ಬಂದ 49 ಸಾಧಕರ ಜೊತೆ ವೇದಿಕೆಯಲ್ಲಿ ಈ ಪ್ರಶಸ್ತಿ ತೆಗದುಕೊಳ್ಳುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತದೆ. ನನಗೆ ಬೆಂಬಲ ನೀಡುತ್ತಿರುವ ಎಲ್ಲಾ ಅಭಿಮಾನಿಗಳಿಗೂ, ಹಿತೈಶಿಗಳಿಗೂ, ಕುಟುಂಬದವರಿಗೂ ಧನ್ಯವಾದಗಳು ಎಂದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top