fbpx
ಸಮಾಚಾರ

ಆಸ್ಪತ್ರೆಯಲ್ಲಿರುವ ಡಿಕೆಶಿಗೆ ಬಿಗ್ ಶಾಕ್ ಕೊಟ್ಟ ಹೈಕೋರ್ಟ್: ಅರ್ಜಿ ವಜಾ

ಅನಾರೋಗ್ಯ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಆದಾಯ ತೆರಿಗೆ ಇಲಾಖೆ ದಾಖಲಿಸಿದ್ದ 4ನೇ ಪ್ರಕರಣದಿಂದ ಕೈ ಬಿಡುವಂತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರಿಂದಾಗಿ ಡಿಕೆಶಿ ಹಾಗೂ ಬೆಂಬಲಿಗರಿಗೆ ಹಿನ್ನಡೆಯಾಗಿದೆ.

ಹೈಕೋರ್ಟ್​ನಲ್ಲಿ ಇಂದು ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆದು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ದೆಹಲಿಯ ಡಿ.ಕೆ. ಶಿವಕುಮಾರ್ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಪ್ರಕರಣ ಹಿನ್ನೆಲೆ ಡಿ.ಕೆ. ಶಿವಕುಮಾರ್​ಗೆ ಇಡಿ ನೀಡಿದ್ದ ಸಮನ್ಸ್ ರದ್ದು ಕೋರಿ ಮತ್ತು ಆರೋಪದಿಂದ ಕೈಬಿಡುವಂತೆ ಅರ್ಜಿ ಸಲ್ಲಿಸಲಾಗಿತ್ತು. ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಐಟಿ ಮೇಲ್ಮನವಿ ಸಲ್ಲಿಸಿತ್ತು.

ದೆಹಲಿ ನಿವಾಸದಲ್ಲಿ ಪತ್ತೆಯಾಗಿದ್ದ 8.5 ಕೋಟಿ ರೂ. ಹಣದ ಕುರಿತು ಆದಾಯ ತೆರಿಗೆ ಇಲಾಖೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿತ್ತು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲಾ ಹಣದ ಉಲ್ಲೇಖ ಮಾಡಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top