fbpx
ಸಮಾಚಾರ

ಆರೋಗ್ಯದಲ್ಲಿ ಮತ್ತೆ ಏರುಪೇರು- ಡಿಕೆ ಶಿವಕುಮಾರ್ ಆಸ್ಪತ್ರೆಗೆ ದಾಖಲು

ಮಾಜಿ ಸಚಿವ, ಕನಕಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಿ. ಕೆ. ಶಿವಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ಮಧ್ಯರಾತ್ರಿ ಎದೆನೋವು ಮತ್ತು ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವರನ್ನು ಶೇಷಾದ್ರಿಪುರಂ ಬಳಿಯಿರುವ ಅಪೋಲೋ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.

ದಾಖಲೆ ರಹಿತ ಹಣ ಹೊಂದಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದಾಗ ಡಿಕೆ ಶಿವಕುಮಾರ್​ಗೆ ಎದೆನೋವು ಕಾಣಿಸಿಕೊಂಡಿತ್ತು. ಜೈಲಿನಿಂದ ಹೊರ ಬಂದ ನಂತರ ಅವರು ಕೊಂಚ ಚೇತರಿಕೆ ಕಂಡಿದ್ದರು. ಆದರೆ, ಈಗ ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಕ್ಟೋಬರ್​ ಕೊನೆಯ ವಾರದಲ್ಲಿ ಡಿಕೆಶಿ ಜೈಲಿನಿಂದ ಹೊರ ಬಂದಿದ್ದರು. ನಂತರ ಆಸ್ಪತ್ರೆಗೆ ತೆರಳಿ ಬಿಪಿ,‌ ಶುಗರ್ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಎರಡು ದಿನಗಳ ಆಸ್ಪತ್ರೆಯಲ್ಲೇ ಇರಬೇಕು ಎಂದು ವೈದ್ಯರು ಹೇಳಿದ್ದರು. ಆದರೆ, ಕನಕಪುರಕ್ಕೆ ಹೋಗುವ ಸಲುವಾಗಿ ಡಿಕೆಶಿ ಡಿಸ್ಚಾರ್ಜ್ ಆಗಿದ್ದರು. ಈಗ ಅವರಿಗೆ ಮತ್ತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಅವರ ಬೆಂಬಲಿಗರಲ್ಲಿ ಆತಂಕ ಮೂಡಿಸಿದೆ.ಇನ್ನೂ ಡಿಕೆ ಶಿವಕುಮಾರ್ ಅವರ ಭೇಟಿಗೆ ಯಾರು ಬರದಂತೆ ಅವರ ಕುಟುಂಬಸ್ಥರು ಮನವಿ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top