fbpx
ಸಮಾಚಾರ

‘ಮಹಾ’ ರಾಜಕೀಯಕ್ಕೆ ರೋಚಕ ತಿರುವು: ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲರ ಶಿಫಾರಸು!

ಕ್ಷಣಕ್ಕೊಂದು ರೀತಿಯ ರಾಜಕೀಯ ತಿರುವುಗಳನ್ನು ಪಡೆಯುತ್ತಿರುವ ಮಹಾರಾಷ್ಟ್ರ ರಾಜಕೀಯದಲ್ಲಿ ಇದೀಗ ಮತ್ತೊಂದು ಹೊಸ ಟ್ವಿಸ್ಟ್ ಉಂಟಾಗಿದೆ. ಸರ್ಕಾರ ರಚಿಸುವಲ್ಲಿ ಬಿಜೆಪಿ, ಶಿವಸೇನಾ ವಿಫಲವಾದ ಬೆನ್ನಲ್ಲೇ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲ ಭಾಗತ್ ಸಿಂಗ್ ಕೊಶ್ಯಾರಿ ಕೇಂದ್ರಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಮೊದಲಿಗೆ ಬಿಜೆಪಿ, ಬಳಿಕ ಶಿವಸೇನೆ ಈಗ ಎನ್ ಸಿಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್, ಎನ್ ಸಿಪಿ ಹಾಗೂ ಶಿವಸೇನಾದ ಮಾತುಕತೆ ವಿಫಲವಾಗಿದ್ದು, ಬಹುತೇಕ ರಾಷ್ಟ್ರಪತಿ ಆಡಳಿತ ಹೇರಿಕೆ ಸಾಧ್ಯತೆ ದಟ್ಟವಾಗಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಮಹಾರಾಷ್ಟ್ರದ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಮಂಗಳವಾರ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ. ಏತನ್ಮಧ್ಯೆ ಮೈತ್ರಿ ಪಕ್ಷವಾಗಿರುವ ಕಾಂಗ್ರೆಸ್ ಜತೆ ಮಾತುಕತೆ ನಡೆಸಿದ ನಂತರ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಎನ್ ಸಿಪಿ ತಿಳಿಸಿದೆ.

ಸರ್ಕಾರ ರಚಿಸಲು ಇಂದು ರಾತ್ರಿ 8-30ರವರೆಗೆ ಸಮಯ ನೀಡಿದ ನಂತರ ಅಗತ್ಯ ಸಂಖ್ಯಾಬಲವನ್ನು ಒಗ್ಗೂಡಿಸಲು ಎನ್ ಸಿಸಿ ಪ್ರಯತ್ನಿಸುತ್ತಿರುವ ಬೆನ್ನಲ್ಲೇ ರಾಜ್ಯಪಾಲರು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಈ ಸಂಬಂಧ ವರದಿಯನ್ನು ಸಲ್ಲಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top