fbpx
ಸಮಾಚಾರ

“ಯಡಿಯೂರಪ್ಪ ಸರ್ಕಾರ ಮೂರೂವರೆ ವರ್ಷ ಸೇಫ್” HD ದೇವೇಗೌಡ!

ಅನರ್ಹರ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದಾಗಿ ಹಾಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಸೇಫ್ ಆಗಿದ್ದಾರೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ವ್ಯಾಖ್ಯಾನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು “ಸುಪ್ರೀಂಕೋರ್ಟ್ ಸ್ವಾಗತಿಸುತ್ತೇನೆ, ಈ ತೀರ್ಪಿನಿಂದಾಗಿ ಯಡಿಯೂರಪ್ಪ ಅವರಿಗೆ ಯಾವುದೇ ತೊಂದರೆಯಾಗುವುದಿಲ್ಲ‌. ಅವರೇ ಮೂರುವರೆ ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ. ನಾವು ಮತ್ತೆ ಕಾಂಗ್ರೆಸ್ ಜೊತೆ ದೋಸ್ತಿ ಮಾಡುವುದಿಲ್ಲ. ಉಳಿದ ಮೂರೂವರೆ ವರ್ಷ ಪಕ್ಷ ಸಂಘಟನೆ ಮಾಡುತ್ತೇವೆ. ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಕುಮಾರಸ್ವಾಮಿ ಮಾತನಾಡುತ್ತಾರೆ. 17 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ನಾವಂತೂ ಮಧ್ಯಂತರ ಚುನಾವಣೆಗೆ ಹೋಗೋ ವಿಚಾರದಲ್ಲಿಲ್ಲ. ಉಪ ಚುನಾವಣೆ ಫಲಿತಾಂಶದಿಂದ ಮದ್ಯಂತರ ಚುನಾವಣೆ ಬರೋದಿಲ್ಲ. ಆದರೆ ಬಿಜೆಪಿಯ ಆಂತರಿಕ ಕಚ್ಚಾಟ ಹೆಚ್ಚಾಗಿ ಬಂದ್ರೆ ನನಗೆ ಗೊತ್ತಿಲ್ಲ” ಎಂದರು.

ಯಡಿಯೂರಪ್ಪ ಸೇಫ್:
ಉಪ ಚುನಾವಣೆಯಲ್ಲಿ 17 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳೇ ಗೆದ್ದರೂ ಅವರಿಗೆ ಸಚಿವರನ್ನಾಗಿ ಮಾಡುವ ಹಾಗಿಲ್ಲ, ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಕೊಡುವ ಹಾಗಿಲ್ಲ, ಕೇವಲ ಶಾಸಕರಾಗಿ ಇರಬಹುದು. ಆಗ ಮೂಲ ಬಿಜೆಪಿಗರನ್ನೇ 27 ಜನರನ್ನು ಮಂತ್ರಿಗಳನ್ನಾಗಿ ಮಾಡಬಹುದು. 104 ಶಾಸಕರಲ್ಲಿ 50 ಜನರನ್ನು ನಿಗಮ ಮಂಡಳಿಗಳ ಅಧ್ಯಕ್ಷರನ್ನಾಗಿ ಮಾಡಬಹುದು. ಹೀಗಾಗಿ ಯಡಿಯೂರಪ್ಪನವರು ಮೂರು ವರ್ಷ ಸೇಫ್ ಆಗಿ ಆಡಳಿತ ನಡೆಸಬಹುದು ಎಂದು ವಿವರಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top