fbpx
ಸಮಾಚಾರ

ಇಂದಿರಾ ಕ್ಯಾಂಟೀನ್ ಇನ್ನು ಮುಂದೆ ಕೆಂಪೇಗೌಡ ಕ್ಯಾಂಟಿನ್?

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ನಗರದಲ್ಲಿರುವ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾವಣೆ ಮಾಡಲು ಚಿಂತನೆ ನಡೆದಿದ್ದು, ‘ಕೆಂಪೇಗೌಡ ಕ್ಯಾಂಟೀನ್’ ಎಂದು ನಾಮಕರಣ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಪಮೇಯರ್ ರಾಮಮೋಹನ್ ರಾಜ್ ‘ಹಸಿದ ಬಡವರಿಗೆ ಊಟ ನೀಡುವ ಜಾಗದಲ್ಲಿ ರಾಜಕೀಯ ಬೇಡ ಎಂಬ ಕಾರಣಕ್ಕೆ ಹೆಸರು ಬದಲಿಸುವ ಸಂಬಂಧ ಮೇಯರ್ ಅವರ ಜತೆ ಅನೌಪಚಾರಿಕ ಚರ್ಚೆ ನಡೆಸಲಾಗಿದೆ.. ಕೆಂಪೇಗೌಡರ ಹೆಸರು ನಾಮಕರಣ ಮಾಡಿದರೆ ಕ್ಯಾಂಟೀನ್‌ಗೆ ಬರುವ ಜನರಿಗೂ ನಮ್ಮದೆಂಬ ಭಾವನೆ ಬರುತ್ತದೆ. ಚುನಾವಣೆ ಮುಗಿದ ಕೂಡಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆಯುತ್ತೇವೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2017ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷಿ ಇಂದಿರಾ ಕ್ಯಾಂಟೀನ್‌ ಯೋಜನೆಗೆ ಮೆಚ್ಚುಗೆಗೆ ಕಾರಣವಾಗಿತ್ತು. ಕಾಂಗ್ರೆಸ್‌ ಪಕ್ಷದ ಮುಖಂಡರಾದ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಈ ಯೋಜನೆಯಿದೆ ಎಂಬ ಕಾರಣಕ್ಕೆ ಈಗಿನ ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್‌ ಯೋಜನೆಯ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ.

ಆದರೆ, ಬಿಬಿಎಂಪಿಗೆ ಇಂದಿರಾ ಕ್ಯಾಂಟೀನ್‌ ನಿರ್ವಹಣೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹಾಗಾಗಿ, ಪಾಲಿಕೆ ಆಡಳಿತರೂಢ ಬಿಜೆಪಿ ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆ ಮಾಡಿ ಬಡವರಿಗೆ ಆಹಾರ ನೀಡುವ ಯೋಜನೆ ಮುಂದುವರಿಸುವುದಕ್ಕೆ ತೀರ್ಮಾನಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top