fbpx
ಸಮಾಚಾರ

ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟಕ್ಕೆ ಕೇಂದ್ರ ಸರ್ಕಾರ ನಿರ್ಧಾರ

2020ರ ಮಾರ್ಚ್ ಒಳಗೆ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಸಂಸ್ಥೆಯನ್ನು ಮಾರಾಟ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಒಂದು ಲಕ್ಷ ಕೋಟಿ ರುಪಾಯಿಗಳನ್ನು ಕ್ರೋಢಿಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಎರಡು ಸಂಸ್ಥೆಗಳನ್ನು ಮಾರಾಟ ಮಾಡಲಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಮುಂದುವರೆದಿದ್ದು ಇದೇ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ನಿರ್ಮಲಾ ಹೇಳಿದ್ದಾರೆ.

ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಮಾರಾಟದ ಸಂಬಂಧ ಅಂತಾರಾಷ್ಟ್ರೀಯ ರೋಡ್ ಶೋಗಳಲ್ಲಿ ಹೂಡಿಕೆದಾರರಿಂದ ವ್ಯಾಪಕ ಆಸಕ್ತಿ ವ್ಯಕ್ತವಾಗಿದೆ. ಒಂದು ವರ್ಷದ ಹಿಂದೆಯೇ ಮಾರಾಟ ಮಾಡುವ ಪ್ರಕ್ರಿಯೆ ನಡೆದಿತ್ತು. ಆದರೆ, ಅಂದು ಹೂಡಿಕೆದಾರರಿಂದ ಸೂಕ್ತ ಸ್ಪಂದನೆ ದೊರಕದ ಕಾರಣ ಪ್ರಕ್ರಿಯೆ ಸ್ಥಗಿತಗೊಂಡಿತ್ತು ಎಂದು ವಿತ್ತ ಸಚಿವರು ತಿಳಿಸಿದ್ದಾರೆ.

ಇಷ್ಟೇ ಅಲ್ಲದೇ ’ಆರ್ಥಿಕ ಹಿಂಜರಿತವನ್ನು ತಡೆಯಲು ಸರ್ಕಾರ ಸಕಾಲದಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದು ಹಲವಾರು ಕ್ಷೇತ್ರಗಳು ಈ ಒತ್ತಡದಿಂದ ಹೊರ ಬರುತ್ತಿವೆ. ಉದ್ಯಮ ವಲಯದಲ್ಲಿ ಬ್ಯಾಲೆನ್ಸ್ ಶೀಟ್ ಸುಧಾರಿಸಲು ಇದು ನೆರವಾಗಿದ್ದು, ಹಲವರು ಹೊಸ ಹೂಡಿಕೆಗೆ ಯೋಜನೆ ಸಿದ್ಧಪಡಿಸಿದ್ದಾರೆ. ಇನ್ನು ಕೆಲ ಕ್ಷೇತ್ರಗಳಲ್ಲಿ ಮಾರಾಟ ಹೆಜ್ಜಾಗುತ್ತಿದ್ದಂತೆಯೇ ಜಿಎಸ್ ಟಿ ಸಂಗ್ರಹವೂ ಅಧಿಕವಾಗಲಿದೆ’ ಎಂದು ತಿಳಿಸಿದ್ದಾರೆ

ಈ ಹೇಳಿಕೆಯು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕೇಂದ್ರ ಸರ್ಕಾರವು ತನ್ನ ತಪ್ಪು ಆರ್ಥಿಕ ನೀತಿಗಳಿಂದ ಮಾಡಿದ ನಷ್ಟವನ್ನು ಸರಿದೂಗಿಸಲು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಮಾರಾಟ ಮಾಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿ ಎಂದು ವಿಪಕ್ಷಗಳು ಟೀಕಿಸಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top