fbpx
ಸಮಾಚಾರ

ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಒಟ್ಟು ಅಸ್ತಿ 1, 215 ಕೋಟಿ: 18 ತಿಂಗಳಲ್ಲೇ 185 ಕೋಟಿ ಹೆಚ್ಚಳ.

ಬಿಜೆಪಿ ಅಭ್ಯರ್ಥಿ ಯಾಗಿ ಹೊಸಕೋಟೆಯಿಂದ ಕಣಕ್ಕಿಳಿದಿರುವ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಸಿದ್ದಾರೆ.ಚುನಾವಣಾ ಆಯೋಗಕ್ಕೆ ಸಲ್ಲಿಕೆ ಮಾಡಿರುವ ನಾಮಪತ್ರದಲ್ಲಿ ಎಂಟಿಬಿ ನಾಗರಾಜ್ ಆಸ್ತಿಯ ಒಟ್ಟು ಮೌಲ್ಯ 1 ಸಾವಿರಕ್ಕೂ ಹೆಚ್ಚು ಕೋಟಿ ರೂ ಎಂದು ಘೋಷಣೆ ಮಾಡಿದ್ದಾರೆ.

ಉಪ ಚುನಾವಣೆಯ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ತಮ್ಮ ಹಾಗೂ ಪತ್ನಿಯ ಹೆಸರಿನಲ್ಲಿದ್ದ ಚರಾಸ್ತಿ, ಸ್ಥಿರಾಸ್ತಿಯನ್ನು ಘೋಷಿಕೊಂಡಿದ್ದಾರೆ. ಅಫಿಡವಿಟ್ ಪ್ರಕಾರ ಎಂಟಿಬಿ ನಾಗರಾಜ್, 419,28,63,731 ರೂ. ಮೌಲ್ಯದ ಚರಾಸ್ತಿ, 2.54 ಕೋಟಿ ರೂ. ಮೌಲ್ಯದ ಕಾರುಗಳು ಸೇರಿದಂತೆ ಒಟ್ಟು 1,195 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ.

18 ತಿಂಗಳಲ್ಲೇ 185 ಕೋಟಿ ಹೆಚ್ಚಳ:
ಕರ್ನಾಟಕದ ಶ್ರೀಮಂತ ರಾಜಕಾರಣಿ ಎನಿಸಿರುವ ಎಂಟಿಬಿ ನಾಗರಾಜ್ ಅವರ ಆಸ್ತಿ ಕೇವಲ 18 ತಿಂಗಳಿನಲ್ಲಿ 185.7 ಕೋಟಿಯಷ್ಟು ಹೆಚ್ಚಾಗಿದೆ ಎನ್ನುತ್ತದೆ ಅವರು ಸಲ್ಲಿಸಿರುವ ಇತ್ತೀಚಿನ ಅಫಿಡವಿಟ್. ಆಗಸ್ಟ್ 2 ರಿಂದ 7ನೇ ದಿನಾಂಕದೊಳಗೇ ಅವರ ಖಾತೆಗೆ 53 ಕಂತುಗಳಲ್ಲಿ 48 ಕೋಟಿಗೂ ಹೆಚ್ಚು ಹಣ ಜಮೆಯಾಗಿದೆ. ಈ ಅವಧಿಯಲ್ಲಿ ಅವರು ಅನರ್ಹತೆಯ ಪ್ರಕರಣ ಎದುರಿಸುತ್ತಿದ್ದರು ಎನ್ನುವುದು ವಿಶೇಷ.

ಅಂದಹಾಗೆ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು 2018ರ ವಿಧಾನಸಭಾ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‍ನಲ್ಲಿ 1,015 ಕೋಟಿ ಘೋಷಣೆಗೊಂಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top