fbpx
ಸಮಾಚಾರ

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ತಾಯಿ ನಿಧನ!

ಕರ್ನಾಟಕ ರಾಜ್ಯ ಘನ ಸರಕಾರದ ಉಪಮುಖ್ಯಮಂತ್ರಿ ಶ್ರೀ ಗೋವಿಂದ ಕಾರಜೋಳ ಅವರ ತಾಯಿ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಪಾರ್ವತಿ ಮಕ್ತಪ್ಪ ಕಾರಜೋಳ ಅವರಿಗೆ 90 ವರ್ಷ ವಯಸ್ಸಾಗಿದ್ದು, ಇಂದು ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಮೃತರು ಉಪ ಮುಖ್ಯಮಂತ್ರಿ ಶ್ರೀ ಗೋವಿಂದ.ಎಂ.ಕಾರಜೋಳ ಸೇರಿದಂತೆ ನಾಲ್ವರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿ ಸೇರಿದಂತೆ ಮಕ್ಕಳು, ಮೊಮ್ಮಕ್ಕಳು ಹಾಗೂ ಮರಿ ಮೊಮ್ಮಕ್ಕಳು ಸೇರಿದಂತೆ ಅಪಾರ ಪ್ರಮಾಣದ ಬಂಧು ಬಳಗವನ್ನ ಅಗಲಿದ್ದಾರೆ. ಇಂದು ಮಧ್ಯಾಹ್ನ ವಿಜಯಪುರ ಜಿಲ್ಲೆಯ ಸ್ವಗ್ರಾಮ ಕಾರಜೋಳದಲ್ಲಿ ಪಾರ್ವತಿ ಮಕ್ತಪ್ಪ ಅವರ ಅಂತ್ಯಕ್ರಿಯೆ ನಡೆದಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಕುಟುಂಬದ ಮೂಲಗಳು ಮಾಹಿತಿ ನೀಡಿವೆ.

ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರ ಮಾತೃಶ್ರೀಯವರಾದ ಪಾರ್ವತಿ ಮುಕ್ತಪ್ಪ ಕಾರಜೋಳ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬ ವರ್ಗದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸು ವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top