fbpx
ಸಮಾಚಾರ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಖ್ಯಾತ ಕಿರುತೆರೆ ಹೀರೋ

ರಕ್ಷಾ ಬಂಧನ’ ಖ್ಯಾತಿಯ ನಟ ಭವಾನಿ ಸಿಂಗ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಭವಾನಿ ಸಿಂಗ್ ತಮ್ಮ ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭವಾನಿ ಸಿಂಗ್ ತಮ್ಮ ಬಹುಕಾಲದ ಗೆಳತಿ ಪಂಕಜಾ ಶಿವಣ್ಣ ಅವರ ಜೊತೆ ಮದುವೆ ಆಗಿದ್ದಾರೆ.

ಭವಾನಿ ಹಾಗೂ ಪಂಕಜಾ ಎರಡು ವರ್ಷದಿಂದ ಸ್ನೇಹಿತರಾಗಿದ್ದರು. ಬಳಿಕ ಭವಾನಿ ಅವರು ಪಂಕಜಾ ಅವರನ್ನು ಪ್ರಪೋಸ್ ಮಾಡಿದ್ದು, ಇವರಿಬ್ಬರ ಸ್ನೇಹ ಪ್ರೀತಿಗೆ ತಿರುಗಿ ಈಗ ಮದುವೆಯಾಗಿದ್ದಾರೆ. ಕೆಲ ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಇದೀಗ ಅದ್ಧೂರಿಯಾಗಿ ಮದುವೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಬಂಧು-ಮಿತ್ರರು, ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ. ಈ ಶುಭ ಸಂದರ್ಭಕ್ಕೆ ಕನ್ನಡ ಚಿತ್ರರಂಗದ ಕೆಲ ಕಲಾವಿದರು ಸಾಕ್ಷಿಯಾಗಿದ್ದಾರೆ.

ಮೂಲತಃ ರಾಜಸ್ಥಾನದವರಾಗಿರುವ ಭವಾನಿ ಸಿಂಗ್ ಬೆಂಗಳೂರಿನಲ್ಲಿ ಬಿಬಿಎಂ ಪದವಿ ಮಾಡಿದ್ದಾರೆ. ಈ ಹಿಂದೆ ಭವಾನಿ ಸಿಂಗ್ ನಟಿಸಿದ ‘ಸುಬ್ಬಲಕ್ಷ್ಮಿ ಸಂಸಾರ’ ಧಾರಾವಾಹಿಯಲ್ಲಿ ಪಂಕಜಾ ನಾಯಕಿಯ ಸ್ನೇಹಿತೆಯ ಪಾತ್ರದಲ್ಲಿ ಅಭಿನಯಿಸಿದ್ದರು. ಸುಬ್ಬಲಕ್ಷ್ಮಿ ಸಂಸಾರ ಅಲ್ಲದೆ ಭವಾನಿ ಸಿಂಗ್ ‘ಚರಣದಾಸಿ’ ಧಾರಾವಾಹಿಯಲ್ಲಿ ನಟಿಸಿದ್ದರು. ಸದ್ಯ ಭವಾನಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ರಕ್ಷಾ ಬಂಧನ’ ಧಾರಾವಾಹಿಯಲ್ಲೂ ನಟಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top