fbpx
ಸಮಾಚಾರ

ವಿಂಡೀಸ್ ಸರಣಿಗೆ ಭಾರತ ತಂಡ ಪ್ರಕಟ; ಇಬ್ಬರು ಕನ್ನಡಿಗರಿಗೆ ಚಾನ್ಸ್!

ವೆಸ್ಟ್​ ಇಂಡೀಸ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ T20 ಸರಣಿಗೆ ಟೀಮ್ ಇಂಡಿಯಾ ಆಟಗಾರರ ಪಟ್ಟಿಯನ್ನ ಪ್ರಕಟಿಸಿದೆ. ಏಕದಿನ ಸರಣಿ ಹಾಗೂ ಟಿ-20 ಪಂದ್ಯಗಳಿಗೆ ಆಟಗಾರರನ್ನ ಆಯ್ಕೆ ಮಾಡಲಾಗಿದೆ. ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿಗೆ ಸ್ಥಾನ ನೀಡಿಲ್ಲ. ಆದರೆ ಇಬ್ಬರು ಕನ್ನಡಿಗರು ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

 

 

ಬಾಂಗ್ಲಾ ವಿರುದ್ಧದ ಟಿ20 ಕ್ರಿಕೆಟ್‌ ಸರಣಿಗೆ ವಿಶ್ರಾಂತಿ ಪಡೆದಿದ್ದ ವಿರಾಟ್‌ ಕೊಹ್ಲಿ, ಇದೀಗ ಏಕದಿನ ಮತ್ತು ಟಿ20 ತಂಡಕ್ಕೆ ಮರಳಿ ಸೇರಿಕೊಂಡಿದ್ದು ನಾಯಕನ ಜವಾಬ್ದಾರಿ ನಿಭಾಯಿಸಲಿದ್ದು, ರೋಹಿತ್‌ ಶರ್ಮಾ ಉಪನಾಯಕನಾಗಿ ಮುಂದುವರಿಯಲಿದ್ದಾರೆ. ಮತ್ತೊಂದೆಡೆ ಗಾಯದ ಸಮಸ್ಯೆಯಿಂದ ಚೇತರಿಸಿರುವ ಅನುಭವಿ ವೇಗದ ಬೌಲರ್‌ ಭುವನೇಶ್ವರ್‌ ಕುಮಾರ್‌ ಹಾಗೂ ವೇಗಿ ಮೊಹಮ್ಮದ್ ಶಮಿ ಟಿ20 ಕ್ರಿಕೆಟ್‌ ತಂಡಕ್ಕೆ ಮರಳಿದ್ದಾರೆ.

ಡಿಸೆಂಬರ್ 6 ರಿಂದ 3 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಇನ್ನು ಡಿಸೆಂಬರ್ 15 ರಿಂದ 3 ಪಂದ್ಯದ ಏಕದಿನ ಸರಣಿ ನಡೆಯಲಿದೆ. ವಿಂಡೀಸ್ ಸರಣಿಗೆ ಹೆಚ್ಚಿನ ಬದಲಾವಣೆಗಳಿಲ್ಲದ ತಂಡವನ್ನು ಆಯ್ಕೆ ಸಮಿತಿ ಪ್ರಕಟಿಸಿದೆ. ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ಮನೀಶ್ ಪಾಂಡೆ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಟಿ20 ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ (ಉಪನಾಯಕ), ಕೆಎಲ್ ರಾಹುಲ್, ಶಿಖರ್ ಧವನ್, ರಿಷಭ್ ಪಂತ್, ಮನೀಷ್ ಪಾಂಡೆ, ಶ್ರೇಯಸ್ ಅಯ್ಯರ್, ಶಿವಂ ದುಬೆ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ದೀಪಕ್ ಚಹರ್, ಭುವನೇಶ್ವರ್ ಕುಮಾರ್, ಮೊಹಮದ್ ಶಮಿ. (ಸರಣಿ ವೇಳಾಪಟ್ಟಿ: ಡಿ. 6, 8 ಮತ್ತು 11).

ಏಕದಿನ ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ (ಉಪನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ರಿಷಭ್ ಪಂತ್, ಮನೀಷ್ ಪಾಂಡೆ, ಶ್ರೇಯಸ್ ಅಯ್ಯರ್, ಕೇದಾರ್ ಜಾಧವ್, ರವೀಂದ್ರ ಜಡೇಜಾ, ಶಿವಂ ದುಬೆ, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮದ್ ಶಮಿ, ದೀಪಕ್ ಚಹರ್, ಭುವನೇಶ್ವರ್ ಕುಮಾರ್. (ಸರಣಿ ವೇಳಾಪಟ್ಟಿ: ಡಿ. 15, 18 ಮತ್ತು 22).

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top