fbpx
ಸಮಾಚಾರ

1163 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ IBPS!

ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂಬ ಇಚ್ಚೆ ಇರುವವರಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (ಐಬಿಪಿಎಸ್‌) ಅವಕಾಶ ಕಲ್ಪಿಸಿದೆ. ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಒಟ್ಟು 1163 ಸ್ಪೆಷಲಿಸ್ಟ್‌ ಆಫೀಸರ್ ಹುದ್ದೆಗಳ ಭರ್ತಿಗೆ ಸಾಮಾನ್ಯ ನೇಮಕಾತಿ ಪ್ರಕ್ರಿಯೆ ನಡೆಸಲಿದೆ. ಆಸಕ್ತ ಅಭ್ಯರ್ಥಿಗಳು ಈ ಅಧಿಸೂಚನೆಯ ಇತರೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು, ಅರ್ಜಿ ಸಲ್ಲಿಸಿ.

ವಿದ್ಯಾರ್ಹತೆ:
ಸ್ಟೆಷಲಿಸ್ಟ್​​​ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಮತ್ತು ಕಾನೂನು ಪದವಿಯನ್ನು ಪಡೆದಿರಬೇಕು.

ವಯೋಮಿತಿ:
20 ರಿಂದ 30 ವರ್ಷದ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೇಮಕಾತಿಯ ಅನುಸಾರವಾಗಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಐಬಿಪಿಎಸ್​ ಸ್ಪೆಷಲಿಸ್ಟ್​ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಎರಡು ಹಂತದ ಆನ್​ಲೈನ್​ ಪರೀಕ್ಷೆ ನಡೆಸಲಾಗುತ್ತದೆ. ಮೊದಲಿಗೆ ಆನ್​ಲೈನ್​ ಪ್ರಿಲಿಮಿನರಿ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಆನ್​ಲೈನ್​ ಮುಖ್ಯ ಪರೀಕ್ಷೆ ಇರುತ್ತದೆ.

ಅರ್ಜಿ ಶುಲ್ಕದ ವಿವರ:
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು 100 ರೂ. ಮತ್ತು ಸಾಮಾನ್ಯ ಅಭ್ಯರ್ಥಿಗಳು 600 ರೂ. ಆರ್ಜಿ ಶುಲ್ಕವನ್ನು ಆನ್​ಲೈನ್​ ಮೂಲಕ ಪಾವತಿಸಬೇಕು

ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 26-11-2019
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ: 26-11-2019

ಅರ್ಜಿ ಸಲ್ಲಿಕೆ ವಿಧಾನ
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿ ಸಲ್ಲಿಸಬೇಕಾಗಿದ್ದು, IBPS ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಿ ಅಥವಾ ಕೆಳಗಿನ ಡೈರೆಕ್ಟ್‌ ಲಿಂಕ್‌ ಕ್ಲಿಕ್ ಮಾಡಿ.

ಅಧಿಸೂಚನೆಗಾಗಿ ಕ್ಲಿಕ್ ಮಾಡಿ

ಆನ್‌ಲೈನ್‌ ಅರ್ಜಿ ಸಲ್ಲಿಕೆಗಾಗಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top