fbpx
ಸಮಾಚಾರ

“ನನಗೆ ರಾಜಕೀಯಕ್ಕೆ ಬರುವ ಬಯಕೆಯೇ ಇರಲಿಲ್ಲ” ಪ್ರಧಾನಿ ನರೇಂದ್ರ ಮೋದಿ!

‘ನಾನೆಂದೂ ರಾಜಕೀಯಕ್ಕೆ ಬರುವ ಆಸೆ ಇಟ್ಟುಕೊಂಡಿರಲಿಲ್ಲ. ಆದರೆ ಇಂದು ನಾನು ರಾಜಕೀಯದಲ್ಲಿದ್ದೇನೆ. ಜನರಿಗೆ ಎಷ್ಟುಒಳ್ಳೆಯದು ಮಾಡಲು ಸಾಧ್ಯವೋ ಅಷ್ಟುಒಳ್ಳೆಯದನ್ನು ಮಾಡುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತಿಂಗಳ ರೇಡಿಯೊ ಕಾರ್ಯಕ್ರಮ ‘ಮನದ ಮಾತು’ದಲ್ಲಿ ಎನ್‌ಸಿಸಿ ವಿದ್ಯಾರ್ಥಿಗಳ ಜೊತೆ ಭಾನುವಾರ ನಡೆಸಿದ ಸಂವಾದದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಕೆಡೆಟ್‌ ಒಬ್ಬರು, ‘ನೀವು ರಾಜಕಾರಣಿ ಆಗದೇ ಹೋದರೆ ಏನಾಗುತ್ತಿದ್ದಿರಿ?’ ಎಂದು ಪ್ರಶ್ನಿಸಿದರು. ‘ಇದು ಕಠಿಣ ಪ್ರಶ್ನೆ. ಪ್ರತಿ ಮಗುವು ಜೀವನದಲ್ಲಿ ವಿವಿಧ ಹಂತಗಳಲ್ಲಿ ಸಾಗುತ್ತದೆ. ಆಗ ಮಗುವು ಒಂದು ಹಂತದಲ್ಲಿ ಹಾಗಾಗಬೇಕು, ಹೀಗಾಗಬೇಕು ಎಂದುಕೊಳ್ಳುತ್ತದೆ. ಆದರೆ ನಾನಂತೂ ರಾಜಕಾರಣಿ ಆಗಬೇಕು ಎಂದು ಎಂದೂ ಅಂದುಕೊಂಡವನಲ್ಲ. ಆ ಬಗ್ಗೆ ನಾನು ಯೋಚಿಸಿಯೂ ಇರಲಿಲ್ಲ’ ಎಂದರು.

” ಮುಂದೆ ಏನು ಮಾಡಬೇಕು ಎಂಬ ಯೋಚನೆಯೇ ನನ್ನ ಮನಸ್ಸಿಗೆ ಬಂದಿರಲಿಲ್ಲ. ರಾಜಕಾರಣಿಯಾಗಬೇಕು ಎಂದು ಯಾವತ್ತೂ ಬಯಸಿರಲಿಲ್ಲ. ಆದರೆ ಈಗ ನಾನು ರಾಜಕಾರಣಿ ಆಗಿರುವುದರಿಂದ ಇಡೀ ಜೀವನವನ್ನು ದೇಶಕ್ಕೆ ಮುಡಿಪಾಗಿಟ್ಟಿದ್ದೇನೆ” ಎಂದು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top