fbpx
ಸಮಾಚಾರ

ಬಿಗ್ ಬ್ರೇಕಿಂಗ್: ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬೆಂಬಲ ನೀಡಿ ಉಪಮುಖ್ಯಮಂತ್ರಿಯಾಗಿದ್ದ ಎನ್’ಸಿಪಿಯ ಅಜಿತ್ ಪವಾರ್, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಗೆ ಬೆಂಬಲ ನೀಡಿ ಎನ್’ಸಿಪಿ ಮತ್ತು ಶರದ್ ಪವಾರ್ ಕೆಂಗೆಣ್ಣಿಗೆ ಗುರಿಯಾಗಿದ್ದ ಜಿತ್ ಪವಾರ್, ಇದೀಗ ಬಿಜೆಪಿಗೆ ಬೆಂಬಲ ವಾಪಸ್ ಪಡೆದು ಮಹಾರಾಷ್ಟ್ರ ರಾಜಕೀಯಕ್ಕೆ ಮತ್ತೊಂದು ಟ್ವಿಸ್ಟ್ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಭಾರತೀಯ ಜನತಾ ಪಕ್ಷ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಕಳೆದ ಶನಿವಾರ ಬೆಳಗ್ಗೆ ರಾಜಭವನದಲ್ಲಿ ಬಿಜೆಪಿಗೆ ಎನ್​ಸಿಪಿ ಬೆಂಬಲ ಘೋಷಿಸಿದ ಕಾರಣ, ದೇವೇಂದ್ರ ಫಡ್ನವೀಸ್​​ ಎರಡನೇ ಬಾರಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಜತೆಗೆ ಡಿಸಿಎಂ ಆಗಿ ಎನ್​​ಸಿಪಿ ಮುಖ್ಯಸ್ಥ ಶರದ್​​ ಪವಾರ್​​ ಅಣ್ಣನ ಮಗ ಅಜಿತ್ ಪವಾರ್ ಕೂಡ ಪ್ರಮಾಣ ವಚನ ತೆಗೆದುಕೊಂಡಿದ್ದರು.

ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಎನ್​ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್​ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿತ್ತು. ಈ ಸಂಬಂಧ ಇಂದು ತೀರ್ಪು ನೀಡಿದ ಸುಪ್ರೀಂ ಕೋರ್ಟ್​, ಬುಧವಾರ ಸಂಜೆ 5 ಗಂಟೆಗೆ ಬಹುಮತ ಸಾಬೀತುಪಡಿಸುವಂತೆ ಆದೇಶಿಸಿದೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ಭಾರೀ ಬೆಳವಣಿಗೆ ಆರಂಭವಾಗಿದೆ. ಇದರ ಜತೆಯಲ್ಲೇ ಯುದ್ಧಕ್ಕೂ ಮುನ್ನ ಅಜಿತ್​ ಪವಾರ್​ ಸೋಲೊಪ್ಪಿಕೊಂಡು ರಾಜೀನಾಮೆ ನೀಡಿದ್ದಾರೆ

ಇನ್ನು ಸೋಮವಾರ ಶಿವಸೇನಾ, ಎನ್​ಸಿಪಿ ಹಾಗೂ ಕಾಂಗ್ರೆಸ್ ಶಾಸಕರು ಮುಂಬೈನ ಖಾಸಗಿ ಹೋಟೆಲ್ ನಲ್ಲಿ ಶಾಸಕರ ಪರೇಡ್ ನಡೆಸುವ ಮೂಲಕ ಮಾಧ್ಯಮದ ಮುಂದೆ ಶಕ್ತಿ ಪ್ರದರ್ಶಿಸಿದ್ದವು. 162 ಶಾಸಕರು ಈ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಒಗ್ಗಟ್ಟನ್ನು ತೋರ್ಪಡಿಸಿದ್ದರು. ಇದರಿಂದಾಗಿ ಏಕಾಂಗಿಯಂತೆ ಕಂಡುಬಂದಿದ್ದ ಅಜಿತ್ ಪವಾರ್ ತಡರಾತ್ರಿ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top