fbpx
ಸಮಾಚಾರ

ನಿಮಗಿದು ಗೊತ್ತೇ? ಪಿಂಕ್ ಬಾಲ್ ನಲ್ಲಿ ಮೊದಲ ಶತಕ ಸಿಡಿಸಿದ್ದು ಕೊಹ್ಲಿ ಅಲ್ಲ, ರಾಹುಲ್ ದ್ರಾವಿಡ್!

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಐತಿಹಾಸಿಕ ಪಿಂಕ್ ಬಾಲ್ ಟೆಸ್ಟ್ ಪಂದ್ಯ ಕೇವಲ ಎರಡೂವರೆ ದಿನಕ್ಕೆ ಮುಕ್ತಾಯಗೊಂಡಿದೆ. ಅದ್ಬುತ ಪ್ರದರ್ಶನ ಮುಂದವರಿಸಿದ ಟೀಂ ಇಂಡಿಯಾ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 46 ರನ್ ಗೆಲುವು ಸಾಧಿಸಿತು. ಈ ಮೂಲಕ 2-0 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ.

ಈ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಮೋಘ ಶತಕ ಭರಿಸುವ ಮೂಲಕ, ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿದ ಮೊದಲ ಭಾರತೀಯ ಎನಿಸಿಕೊಂಡರು. ಆದರೆ ಕೊಹ್ಲಿಗಿಂತ ಮೊದಲು ಟೆಸ್ಟ್ ಸ್ಪೆಷಲಿಸ್ಟ್ ದಿ ವಾಲ್ ಖ್ಯಾತಿಯ ‘ರಾಹುಲ್ ದ್ರಾವಿಡ್’ ಶತಕ ಸಿಡಿಸಿದ್ದಾರೆ.

ಅಸಲಿಗೆ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಮೊದಲ ಶತಕ ಸಿಡಿಸಿದ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್‌ಗೆ ಸಲ್ಲಬೇಕು. ಏಕೆಂದರೆ 2011ರಲ್ಲೇ ರಾಹುಲ್ ದ್ರಾವಿಡ್ ಪಿಂಕ್ ಬಾಲ್ ಸೆಂಚುರಿ ದಾಖಲಿಸಿದ್ದರು. ಆದರೆ ಅದು ಅಂತಾರಾಷ್ಟ್ರೀಯ ಪಂದ್ಯವಾಗಿರಲಿಲ್ಲ ಅಷ್ಟೇ. ಹೌದು, 2011ರಲ್ಲಿ ರಾಹುಲ್ ದ್ರಾವಿಡ್ ಇಂಗ್ಲೀಷ್ ಕೌಂಟಿ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿ ಎಂಸಿಸಿ ತಂಡದ ಪರವಾಗಿ ಆಡಿದ್ದರು. ಪಿಂಕ್ ಟೆಸ್ಟ್ ಪಂದ್ಯದಲ್ಲಿ ರಾಹುಲ್ ದ್ರಾವಿಡ್, ನಾಟಿಂಗ್‌ಹ್ಯಾಮ್‌ಶೈರ್ ವಿರುದ್ಧ ಸೆಂಚುರಿ ಸಿಡಿಸಿದ್ದರು.

ಅಬುಧಾಬಿಯಲ್ಲಿ ನಡೆದ ಹಗಲು ರಾತ್ರಿ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ರಾಹುಲ್ ದ್ರಾವಿಡ್ ಶತಕ ದಾಖಲಿಸಿದ್ದರು. 106 ರನ್ ಸಿಡಿಸಿದ ದ್ರಾವಿಡ್, ಎಂಸಿಸಿ ತಂಡಕ್ಕೆ 174 ರನ್ ಗೆಲುವು ತಂದುಕೊಟ್ಟಿದ್ದರು. ಹೀಗಾಗಿ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಮೊದಲ ಶತಕ ಸಿಡಿಸಿದ ಭಾರತೀಯ ರಾಹುಲ್ ದ್ರಾವಿಡ್ ಎಂಬುದು ಹೆಚ್ಚು ಜನರಿಗೆ ಗೊತ್ತಿಲ್ಲದ ವಿಚಾರ..

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top