fbpx
ಸಮಾಚಾರ

ಅಯೋಧ್ಯೆ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ನಿರ್ಧಾರ

ಅಯೋಧ್ಯೆ ರಾಮ ಜನ್ಮಭೂಮಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ಐತಿಹಾಸಿಕ ತೀರ್ಪನ್ನು ಪ್ರಶ್ನಿಸಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ನಿರ್ಧರಿಸಿದೆ.

 

 

ತೀರ್ಪಿನ ಸಂಬಂಧ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ಚರ್ಚಿಸಲು ಮಂಗಳವಾರ ಸುನ್ನಿ ವಕ್ಫ್‌ಬೋರ್ಡ್‌ನ ಸಭೆ ಉತ್ತರಪ್ರದೇಶದ ಲಖನೌದಲ್ಲಿ ನಡೆಯಿತು. ಈ ಸಭೆಯಲ್ಲಿ ಮಂಡಳಿಯ 8 ಮಂದಿಯ ಪೈಕಿ 7 ಮಂದಿ ಹಾಜರಾಗಿದ್ದರು.

ಸಭೆಯ ನಂತರ ಮಾತನಾಡಿದ ವಕ್ಫ್‌ ಬೋರ್ಡ್‌ನ ರಜಾಕ್‌ ಖಾನ್‌, ‘ಅಯೋಧ್ಯೆ ತೀರ್ಪಿಗೆ ಸಂಬಂಧಿಸಿದಂತೆ ಮರುಪರಿಶೀಲನಾ ಅರ್ಜಿ ಸಲ್ಲಿಸಬಾರದು ಎಂಬುದು ಇಂದಿನ ಸಭೆಯ ಬಹುತೇಕರ ತೀರ್ಮಾನವಾಗಿದೆ,’ ಎಂದು ಅವರು ತಿಳಿಸಿದರು.

ಅಂದಹಾಗೆ ಸುಪ್ರೀಂ ಕೋರ್ಟ್ ವಿವಾದಿತ ಭೂಮಿಯನ್ನು ರಾಮಲಲ್ಲಾಗೆ ನೀಡಿತ್ತು. ಇನ್ನು ಬಾಬರಿ ಮಸೀದಿ ಧ್ವಂಸ ಮಾಡಿ ಮತ್ತೊಂದು ಧರ್ಮದ ಆಚರಣೆಗೆ ಧಕ್ಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲೇ ವಕ್ಫ್ ಬೋರ್ಡ್ ಗೆ 5 ಎಕರೆ ಭೂಮಿಯನ್ನು ನೀಡಲು ಆದೇಶಿಸಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top