fbpx
ಸಮಾಚಾರ

ಕರ್ನಾಟಕ ರಾಜ್ಯ ಕಾರ್ಮಿಕ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೊಸೈಟಿ ಕೆಲಸ ಮಾಡಲು ಸುವರ್ಣಾವಕಾಶ!

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಯುವಕರ ಆರ್ಥಿಕ ಸಬಲೀಕರಣ, ಉದ್ಯೋಗಾವಕಾಶ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಕಾರ್ಮಿಕ ಇಲಾಖೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚೆಚ್ಚು ಕಾರ್ಯಮ್ರಮಗಳನ್ನು ಪ್ರಸ್ತುತಪಡಿಸುತ್ತಿದೆ.. ಈ ಕಾರ್ಯಮ್ರಗಳಲ್ಲಿ ಆಶಾದೀಪ ಯೋಜನೆ ಕೂಡ ಒಂದು..

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಯುವಕ/ಯುವತಿಯರಿಗೆ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ದೊರಕಿಸಿಕೊಡಲು ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಕಾರ್ಮಿಕ ಕಲ್ಯಾಣ ಮತ್ತು ಸಾಮಾಜಿಕ ಭದ್ರತೆ ಅಡಿಯಲ್ಲಿ ಆಶಾ ದೀಪ ಯೋಜನೆಯನ್ನು ಜಾರಿಗೆ ತಂದಿದೆ. ಖಾಸಗಿ ಕಂಪೆನಿಗಳಲ್ಲಿ ಕೆಲಸಕ್ಕೆ ಸೇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಆಡಳಿತ ಮಂಡಳಿ ಭರಿಸುವ ESI ಮತ್ತು PF ವಂತಿಗೆಯ ಹಣವನ್ನು ಕಾರ್ಮಿಕ ಇಲಾಖೆಯು ಆಶಾದೀಪ ಯೋಜನೆಯಲ್ಲಿ ಭರಿಸುತ್ತದೆ.

ಇದೀಗ ಕರ್ನಾ ಟಕ ರಾಜ್ಯ ಕಾರ್ಮಿಕ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೊಸೈಟಿ ಕಛೇರಿಗೆ ಆಶಾದೀಪ ಯೋಜನೆಯಡಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಸಿಬ್ಬಂದಿಗಳನ್ನು ಪೂರೈಸಲು ಸೂಕ್ತ ಸಲಹೆಗಾರರು, ಸೇವಾ ಸಂಸ್ಥೆ ಅಯ್ಕೆ ಮಾಡಲು ಹತ್ತು ದಿನಗಳ ಕಿರು ಟೆಂಡರ್ ಅನ್ನುಆಹ್ವಾನಿಸಲಾಗಿದೆ. ಆಸಕ್ತರು ಈ ಸುವರ್ಣಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

ಈ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ಆಶಾದೀಪ ಯೋಜನೆಯ ಟ್ವಿಟರ್ ಖಾತೆಯನ್ನು ಸಂಪರ್ಕಿಸಿ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top